More

    ಹಾಜರಾತಿ ಕೊರತೆ: ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ, ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

    ಬೆಂಗಳೂರು: ಕಾಲೇಜು ತರಗತಿ ಅವಧಿಯಲ್ಲಿ ಹಾಜರಾತಿ ಕೊರತೆಯಿಂದ 2023ರ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಿಂದ ವಂಚಿತರಾಗಿದ್ದ ಕಲಾ ಮತ್ತು ವಾಣಿಜ್ಯ ವಿಭಾಗದ 12,385 ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಖಾಸಗಿ ಅಭ್ಯರ್ಥಿಗಳಾಗಿ ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ.

    2022-23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ತರಗತಿ ವಿದ್ಯಾರ್ಥಿಗಳಾಗಿ ನೋಂದಣಿ ಮಾಡಿಕೊಂಡಿದ್ದ ಸಾವಿರಾರು ವಿದ್ಯಾರ್ಥಿಗಳು ಹಾಜರಾತಿ ಕೊರತೆಯಿಂದ ಕಳೆದ ಮಾರ್ಚ್‌ನಲ್ಲಿ ಪರೀಕ್ಷೆಗೆ ಹಾಜರಾಗುವ ಅರ್ಹತೆ ಕಳೆದುಕೊಂಡಿದ್ದರು. ಇಂತಹ ಮಕ್ಕಳ ಪೈಕಿ ಕಲಾ ವಿಭಾಗದಲ್ಲಿ 7,985 ಮತ್ತು ವಾಣಿಜ್ಯ ವಿಭಾಗದಲ್ಲಿ 4400 ಮಕ್ಕಳಿದ್ದಾರೆ. ಈ ಎರಡು ವಿಭಾಗದ ಒಟ್ಟು 12,385 ಮಕ್ಕಳಿಗೆ ಇದೇ ಮೇ 23ರಿಂದ ನಡೆಯುವ ಪೂರಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಆಸಕ್ತರು ಮೇ 20ರೊಳಗೆ ತಮ್ಮ ಕಾಲೇಜುಗಳಲ್ಲಿ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದು.

    ಇದನ್ನೂ ಓದಿ: ಗುದನಾಳದಲ್ಲಿ ಚಿನ್ನಾಭರಣ ಬಚ್ಚಿಟ್ಟು ಸಾಗಾಟ; ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನ

    ಹಾಜರಾತಿ ಕೊರತೆಯಿಂದ ಶಾಲಾ ವಿದ್ಯಾರ್ಥಿಗಳಾಗಿ ಪರೀಕ್ಷೆ ಬರೆಯುವ ಅರ್ಹತೆ ಕಳೆದುಕೊಂಡಿರುವ ಈ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿ ಪಾಠ ಕೇಳಿರುವುದರಿಂದ ಖಾಸಗಿ ವಿದ್ಯಾರ್ಥಿಗಳಾಗಿ ಈಗಲೇ ಪರೀಕ್ಷೆ ಬರೆದರೆ ಉತ್ತೀರ್ಣವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಜತೆಗೆ ಅವರು ಮತ್ತೆ ಕಾಲೇಜಿಗೆ ಪ್ರವೇಶ ಪಡೆದು ಒಂದು ವರ್ಷ ಬಳಿಕ ಪರೀಕ್ಷೆ ಬರೆಯುವುದರಿಂದ ಸಮಯ ವ್ಯರ್ಥವಾಗಲಿದೆ. ಹಾಗಾಗಿ ಇದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮಂಡಳಿ ಅಧ್ಯಕ್ಷ ಆರ್.ರಾಮಚಂದ್ರನ್ ತಿಳಿಸಿದ್ದಾರೆ.

    ಇಷ್ಟದ ಬಟ್ಟೆ ಧರಿಸಲು ಬಿಡುತ್ತಿಲ್ಲ: ತಾಯಿಯ ವಿರುದ್ಧ ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಬಾಲಕ!

    ರಾಜ್ಯದಲ್ಲಿ ಕುಸಿದಿದ್ದ ತಾಪಮಾನ ದಿಢೀರ್ ಹೆಚ್ಚಳ; ಬಿಸಿಲಿನ ಬೇಗೆಗೆ ಜನ ಹೈರಾಣ

    3ನೇ ಪತ್ನಿಗಾಗಿ ನಿದ್ದೆ ಮಾಡುತ್ತಿದ್ದ ಮಗನ ಕತ್ತು ಹಿಸುಕಿ ಕೊಂದ ತಂದೆ; ಹತ್ಯೆ ವಿಡಿಯೋ ಹೆಂಡತಿಗೆ ಕಳುಹಿಸಿದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts