ಅನಿತಾ ಸ್ಪರ್ಧೆಗೆ ಅಪಸ್ವರ?

Latest News

ಉಪಚುನಾವಣೆ ಪ್ರಚಾರ: ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಬಫೂನ್ ಇದ್ದಂತೆ ಎಂದ ರೇಣುಕಾಚಾರ್ಯ

ಹಾವೇರಿ: ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಬಫೂನ್ ಇದ್ದಂತೆ ಎಂದು ಸಿಎಂ ಸಂಸದೀಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ರಾಣೆಬೆನ್ನೂರಿನಲ್ಲಿ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಅರುಣಕುಮಾರ...

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಬೆಂಗಳೂರು: ಅಪ್ಪ-ಮಕ್ಕಳ ಪಕ್ಷ ಎಂಬ ಅಪವಾದದಿಂದ ಹೊರಬರಲು ವಿಧಾನಸಭಾ ಚುನಾವಣೆಗೆ ಮುನ್ನ ‘ನಮ್ಮ ಕುಟುಂಬದಿಂದ ಇಬ್ಬರೇ ಸ್ಪರ್ಧಿಗಳು’ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಈಗ ಅವರಿಗೆ ಮುಳುವಾಗುತ್ತಿದೆ.

ರಾಮನಗರ, ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಭರ್ಜರಿ ವಿಜಯ ಪತಾಕೆ ಹಾರಿಸಿದ್ದ ಕುಮಾರಸ್ವಾಮಿ, ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ ರಾಮನಗರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಚುನಾವಣೆ ಪ್ರಚಾರಕ್ಕೆ ತೆರಳದಿದ್ದರೂ ನನ್ನನ್ನು ಗೆಲ್ಲಿಸಿದ ಹಾಗೂ ಒಕ್ಕಲಿಗರ ಪ್ರಾಬಲ್ಯವೇ ಹೆಚ್ಚಿರುವ ಈ ಕ್ಷೇತ್ರವನ್ನು ಶತಾಯಗತಾಯ ಉಳಿಸಿಕೊಳ್ಳಲೇಬೇಕೆಂಬುದು ಜೆಡಿಎಸ್ ಲೆಕ್ಕಾಚಾರ. ಕ್ಷೇತ್ರದಲ್ಲಿ ಗೌಡರ ಕುಟುಂಬದವರು ಅಭ್ಯರ್ಥಿಯಾದರೆ ಮಾತ್ರ ಗೆಲುವು ಸುಲಭ ಹಾಗೂ ಬಿಜೆಪಿ ಮಟ್ಟ ಹಾಕಬಹುದು ಎಂಬುದನ್ನು ಮನಗಂಡಿರುವ ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಕಣಕ್ಕಿಳಿಸಲು ಮುಂದಾಗಿದ್ದಾರೆ.

‘ಚುನಾವಣೆಗೂ ಮುನ್ನ ಕುಟುಂಬದಿಂದ ಇಬ್ಬರು (ಕುಮಾರಸ್ವಾಮಿ ಮತ್ತು ರೇವಣ್ಣ) ಮಾತ್ರ ಸ್ಪರ್ಧಿಗಳು’ ಎಂದು ಸಾರಿ ಸಾರಿ ಹೇಳಿದ್ದೀರಿ. ಈಗ ನಿಮ್ಮ ಕುಟುಂಬದವರನ್ನೇ ಕಣಕ್ಕಿಳಿಸುವುದು

ಸರಿಯಲ್ಲ. ಕ್ಷೇತ್ರದಲ್ಲಿ ಬಹುಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಿ ಎಂದು ಮುಸ್ಲಿಮರು ಮಾತ್ರವಲ್ಲದೆ ಬಹುತೇಕ ಮುಖಂಡರು ಒತ್ತಡ ಹಾಕುತ್ತಿದ್ದಾರೆ. ಎಲ್ಲ ಪಕ್ಷಗಳು ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರುವಾಗ ಜೆಡಿಎಸ್ ಟಿಕೆಟ್ ನೀಡಿದರೆ ಪಕ್ಷ ಅದರ ಪ್ರತಿಫಲ ಪಡೆಯಬಹುದು ಎಂಬುದು ಮುಖಂಡರ ವಾದ. ಅಲ್ಲದೆ ಪಕ್ಷದ ಆಯಕಟ್ಟಿನ ಹುದ್ದೆಯಲ್ಲಿರುವವರೇ ಅನಿತಾ ಸ್ಪರ್ಧೆಗೆ ಅಪಸ್ವರ ತೆಗೆದಿದ್ದಾರೆಂದು ಮೂಲಗಳು ಖಚಿತಪಡಿಸಿವೆ.

ಜಫ್ರುಲ್ಲಾ ಬೇಡಿಕೆ: ಕ್ಷೇತ್ರದಲ್ಲಿ ಸ್ಪರ್ಧಿಸಲು ನನಗೆ ಅವಕಾಶ ಕೊಡಿ, ಇಲ್ಲವೇ ನನ್ನನ್ನು ವಿಧಾನಪರಿಷತ್ತಿಗೆ ನಾಮಕರಣ ಮಾಡಿ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಫಾರೂಕ್​ಗೆ ಸಚಿವ ಸ್ಥಾನ ಇಲ್ಲ

ಸಂಪುಟದಲ್ಲಿ ಜೆಡಿಎಸ್​ನಿಂದ ಯಾವುದೇ ಮುಸ್ಲಿಂ ಪ್ರತಿನಿಧಿ ಇಲ್ಲ. ಬಿ.ಎಂ.ಫಾರೂಕ್​ರನ್ನು ಇತ್ತೀಚೆಗಷ್ಟೆ ಮೇಲ್ಮನೆಗೆ ಆಯ್ಕೆ ಮಾಡಲಾಗಿದೆ. ಅವರನ್ನು ಸಚಿವರನ್ನಾಗಿಸಲು ಸ್ವತಃ ಸಿಎಂಗೆ ಇಷ್ಟವಿಲ್ಲ ಎನ್ನಲಾಗುತ್ತಿದೆ. ಹಾಗಾಗಿ ಜಫ್ರುಲ್ಲಾ ಖಾನ್, ‘ನನ್ನನ್ನು ಆಯ್ಕೆ ಮಾಡಿ ಮಂತ್ರಿ ಸ್ಥಾನ ಕೊಡಿ’ ಎಂದು ಕೇಳಿದ್ದಾರೆಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ರಾಮನಗರದಲ್ಲಿ ಜೆಡಿಎಸ್ ಬೆಂಬಲಿಸುವುದು ಬಹುತೇಕ ಖಚಿತವಾಗಿರುವುದರಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬುದು ಜೆಡಿಎಸ್ ವರಿಷ್ಠರಿಗೆ ಯಕ್ಷ ಪ್ರಶ್ನೆಯಾಗಿದೆ.

ಫ್ಯಾಮಿಲಿ ದರ್ಬಾರ್!

ಕಳೆದ ಬಾರಿ ಪ್ರಧಾನಿ ಭೇಟಿ ವೇಳೆ ರಾಜ್ಯ ನಿಯೋಗದಲ್ಲಿ ಅರ್ಧದಷ್ಟು ನಿಮ್ಮ ಕುಟುಂಬದವರೇ ಇದ್ದಾರಲ್ಲ ಎಂದು ಕುಮಾರಸ್ವಾಮಿಗೆ ಮೋದಿ ತಮಾಷೆಯಾಗಿ ಹೇಳಿದ್ದರು. ಈ ಬಾರಿ ಇಬ್ಬರು ಕೇಂದ್ರ ಸಚಿವರ ಭೇಟಿಗೂ ಕುಮಾರಸ್ವಾಮಿ, ದೇವೇಗೌಡ ಮತ್ತು ಎಚ್.ಡಿ.ರೇವಣ್ಣ ಬಿಟ್ಟರೆ ಬೇರ್ಯಾವ ಸಚಿವರೂ ಬಂದಿರಲಿಲ್ಲ. ಗಡ್ಕರಿ ಜತೆ ಭೇಟಿ ವೇಳೆ ರಾಜ್ಯದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗೈರು ಎದ್ದುಕಾಣುತ್ತಿತ್ತು.


ರಾಜ್ಯಕ್ಕೆ ಪ್ರವಾಹ ಪರಿಹಾರ

ನವದೆಹಲಿ: ಕೊಡಗು ಸೇರಿ 8 ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಯಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ರಾಜ್ಯಕ್ಕೆ ಹಣ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.

ದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಸಚಿವ ಎಚ್.ಡಿ. ರೇವಣ್ಣ ಅವರಿಗೆ ಭರವಸೆ ನೀಡಿದ ಸಿಂಗ್, ಕೇಂದ್ರ ಅಧ್ಯಯನ ತಂಡದ ವರದಿ ಆಧರಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರವಾಹದಿಂದಾಗಿ ಸುಮಾರು 3,436 ಕೋಟಿ ರೂ. ನಷ್ಟವುಂಟಾಗಿದೆ ಎಂದು ಸಿಎಂ ಎಚ್​ಡಿಕೆ ಮಾಹಿತಿ ನೀಡಿದರು.

ಮೇಕೆದಾಟುಗೆ ಭರವಸೆ: ರಾಜ್ಯದ ಕಾವೇರಿ ಕಣಿವೆಯಲ್ಲಿ ಜಾರಿಗೊಳಿಬೇಕೆಂದು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಯಾವ ಕ್ಷಣದಲ್ಲೂ ಒಪ್ಪಿಗೆ ಸೂಚಿಸಬಹುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ, ಯೋಜನೆ ಕುರಿತ ಎಲ್ಲ ದಾಖಲೆಗಳನ್ನು ನೀಡಲಾಗಿದೆ. ದೇವೇಗೌಡರು ಕೂಡ ಯೋಜನೆಯಿಂದಾಗುವ ಲಾಭಗಳ ಬಗ್ಗೆ ಸಚಿವರಿಗೆ ಮನದಟ್ಟು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ತಮಿಳುನಾಡು ಮತ್ತು ಕರ್ನಾಟಕದ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವಂತೆ ಕೇಳಿಕೊಳ್ಳಲಾಗಿದೆ ಎಂದರು.

ಮಹದಾಯಿ ನ್ಯಾಯಾಧಿಕರಣದ ಐತೀರ್ಪಿನ ಅಧಿಸೂಚನೆ ಪ್ರಕಟಿಸಬೇಕು. ಇಲ್ಲದಿದ್ದಲ್ಲಿ ಜಲ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಗೋವಾ ಸರ್ಕಾರ ತೀರ್ಪನ್ನು ಪ್ರಶ್ನಿಸಿ ಸ್ಪಷ್ಟೀಕರಣ ಅರ್ಜಿ ಸಲ್ಲಿಸಿದ್ದರೂ, ಅಧಿಸೂಚನೆ ಪ್ರಕಟಕ್ಕೆ ಅಡ್ಡಿಯಾಗದು. ನ್ಯಾಯಾಧಿಕರಣ ತೀರ್ಪಿಗೆ ಅನುಗುಣವಾಗಿ ಅಧಿಸೂಚನೆ ಹೊರಡಿಸಿದ ಎಷ್ಟೋ ಉದಾಹರಣೆಗಳಿವೆ ಎಂದೂ ಸಚಿವರ ಗಮನಸೆಳೆದಿದ್ದೇವೆ ಎಂದು ಸಿಎಂ ಹೇಳಿದರು.

ಇದೇ ವೇಳೆ, ರಾಜ್ಯದ ಪ್ರವಾಹಪೀಡಿತ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ 257 ಕೋಟಿ ರೂ. ನೆರವು ಬಿಡುಗಡೆ ಮಾಡಬೇಕು ಎಂದು ಮನವಿ ಸಲ್ಲಿಸಲಾಯಿತು.

ಸಾಲಮನ್ನಾ ಯೋಜನೆಯ ಲಾಭ ಪಡೆಯುವ ನಿಟ್ಟಿನಲ್ಲಿ ರೈತರಿಂದ ಮಾಹಿತಿ ಕೇಳಲಾಗಿದೆ. ಇದಕ್ಕೆ ಯಾವುದೇ ಕಾಲಮಿತಿ ನಿಗದಿಪಡಿಸಲಾಗಿಲ್ಲ. ವಿನಾಕಾರಣ ರೈತರು ಆತಂಕಪಡುವ ಅಗತ್ಯವಿಲ್ಲ.

| ಕುಮಾರಸ್ವಾಮಿ ಮುಖ್ಯಮಂತ್ರಿ

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...