ವಿಜಯ ಬ್ಯಾಂಕ್ ವಿಲೀನಕ್ಕೆ ವಿರೋಧ

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

<ಕೇಂದ್ರ ಸರ್ಕಾರದ ತೀರ್ಮಾನದ ವಿರುದ್ಧ ಆಕ್ರೋಶ * ಮೋದಿ ನಿಲುವಿಗೆ ಆಕ್ರೋಶ>

ವಿಜಯವಾಣಿ ಸುದ್ದಿಜಾಲ ಮಂಗಳೂರು
ಲಾಭದಲ್ಲಿರುವ ಕರಾವಳಿ ಮೂಲದ ವಿಜಯ ಬ್ಯಾಂಕನ್ನು ನಷ್ಟದಲ್ಲಿರುವ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸಿ ‘ಬ್ಯಾಂಕ್ ಆಫ್ ಬರೋಡಾ’ ಹೆಸರನ್ನೇ ಅಂತಿಮಗೊಳಿಸಿರುವ ಕೇಂದ್ರ ಸರ್ಕಾರದ ತೀರ್ಮಾನದ ವಿರುದ್ಧ ಕರಾವಳಿಯಲ್ಲಿ ವಿರೋಧ ವ್ಯಕ್ತವಾಗಿದೆ.

ಬ್ಯಾಂಕ್ ಆಫ್ ಬರೋಡಾ 3 ಸಾವಿರ ಕೋಟಿ ರೂ. ನಷ್ಟದಲ್ಲಿದ್ದರೆ, ವಿಜಯ ಬ್ಯಾಂಕ್ 200 ಕೋಟಿ ರೂ.ಲಾಭದಲ್ಲಿದೆ. ವಿಲೀನಗೊಳಿಸುವಾಗ ಸಹಜವಾಗಿ ಲಾಭದಲ್ಲಿರುವ ಬ್ಯಾಂಕ್ ಹೆಸರನ್ನೇ ಇಡಬೇಕಿತ್ತು. ಆದರೆ ಕೇಂದ್ರ ಸರ್ಕಾರ ಉತ್ತಮ ಆರ್ಥಿಕ ಆಡಳಿತ ನಡೆಸಿದ ವಿಜಯ ಬ್ಯಾಂಕ್ ಹೆಸರನ್ನೇ ಕೈಬಿಟ್ಟಿದೆ. ಬ್ಯಾಂಕ್ ಆಫ್ ಬರೋಡಾ ಗುಜರಾತ್‌ನ ಬ್ಯಾಂಕ್ ಎನ್ನುವ ಕಾರಣಕ್ಕಾಗಿ ಹೀಗೆ ಮಾಡಲಾಗಿದೆಯೇ? ಇದರ ವಿರುದ್ಧ ಕರಾವಳಿಯ ಸಂಸದರು, ಕೇಂದ್ರ ಸಚಿವರು ಯಾಕೆ ಸುಮ್ಮನಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಪ್ರಶ್ನಿಸಿದರು.

ಕೇಂದ್ರ ಸರ್ಕಾರ ದೇಶದ ಸ್ವಾಯತ್ತ ಆರ್ಥಿಕ ಸಂಸ್ಥೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಯೋಜನಾ ಆಯೋಗದ ಹೆಸರನ್ನೇ ಬದಲಾವಣೆಗೊಳಿಸಿ ನೀತಿ ಆಯೋಗ ಮಾಡಿದರು. ಈಗ ಅದರ ಅಧ್ಯಕ್ಷರು ಎಲ್ಲಿದ್ದಾರೆ? ಕೇಂದ್ರದ ಹಸ್ತಕ್ಷೇಪದಿಂದಾಗಿಯೇ ಆರ್ಥಿಕ ಸಂಸ್ಥೆಗಳ ಮುಖ್ಯಸ್ಥರು ರಾಜೀನಾಮೆ ಕೊಟ್ಟು ಹೋಗುತ್ತಿದ್ದಾರೆ. ಈ ನಡುವೆ ಬ್ಯಾಂಕ್ ವಿಲೀನ ಮೂಲಕ ಬ್ಯಾಂಕಿಂಗ್ ವ್ಯವಸ್ಥೆಯಲ್ಲೂ ಸರ್ವಾಧಿಕಾರಿ ಧೋರಣೆ ತಾಳುತ್ತಿದೆ ಎಂದವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಕ್ಷೇಪಿಸಿದರು.

ಐಡೆಂಟಿಡಿ ವಿಷಯ: ವಿಜಯ ಬ್ಯಾಂಕ್ ಉಳಿಸಿಕೊಳ್ಳುವುದು ನಮ್ಮ ಅಸ್ಮಿತೆಯ ವಿಷಯ. ಜಿಲ್ಲೆಯ ಅನೇಕ ಕ್ರೀಡಾಪಟುಗಳು, ವಿವಿಧ ಕ್ಷೇತ್ರಗಳ ಸಾಧಕರಿಗೆ ಉದ್ಯೋಗ ನೀಡಿದ ಸಂಸ್ಥೆ. ಈ ಹಿನ್ನೆಲೆಯಲ್ಲಿ ಈ ಬ್ಯಾಂಕ್ ವಿಲೀನ ವಿರುದ್ಧ ಪ್ರಬಲ ಪ್ರತಿಭಟನೆ ಮುಂದುವರಿಯಲಿದೆ ಎಂದು ವಿಜಯ ಬ್ಯಾಂಕ್ ನೌಕರರ ಸಂಘಟನೆ ಪ್ರಾದೇಶಿಕ ಅಧ್ಯಕ್ಷ ರಘುರಾಮ ಸುವರ್ಣ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರದ ಜತೆ ನಮಗೆ ಸಂವಹನ ಸೇತುವಾಗಿ ಇರುವವರು ಸ್ಥಳೀಯ ಸಂಸದರು. ಅವರು ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದವರು ಆಗ್ರಹಿಸಿದ್ದಾರೆ.

ಮೋದಿ ವಿರುದ್ಧ ಮತ ಎಚ್ಚರಿಕೆ: ಬ್ಯಾಂಕ್ ವಿಲೀನ ಅದರಲ್ಲೂ ಮುಖ್ಯವಾಗಿ ಲಾಭದಲ್ಲಿರುವ ಬ್ಯಾಂಕನ್ನು ನಷ್ಟದಲ್ಲಿರುವ ಬ್ಯಾಂಕಿನ ಜತೆ ವಿಲೀನ ವಿರುದ್ಧ ವಿಜಯ ಬ್ಯಾಂಕ್ ನೌಕರರು ಒಳಗೊಂಡ ಯುನೈಟೆಡ್ ಫ್ರಂಟ್ ಬ್ಯಾಂಕ್ ನೇತೃತ್ವದಲ್ಲೇ ಪ್ರತಿಭಟನೆ ನಡೆದಿದೆ. ಸರ್ಕಾರ ತನ್ನ ಪ್ರಯತ್ನ ಮುಂದುವರಿಸಿದರೆ ನಾವು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಮತ ಚಲಾಯಿಸಲಿದ್ದೇವೆ ಎಂದು ವಿಜಯ ಬ್ಯಾಂಕ್ ನೌಕರರ ಸಂಘ ಮಾಜಿ ಅಧ್ಯಕ್ಷ ಮೂಲ್ಕಿ ಕರುಣಾಕರ ಶೆಟ್ಟಿ ಎಚ್ಚರಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜತೆ ವಿವಿಧ ಬ್ಯಾಂಕುಗಳು ವಿಲೀನಗೊಳಿಸಿದ ಪರಿಣಾಮ ಒಳ್ಳೆಯದಾಗಿಲ್ಲ. ನೌಕರರಿಗೆ ಕಷ್ಟವಾಗಿದೆ. ಸರ್ವೀಸ್ ಸಹಿತ ವಿವಿಧ ಸೌಲಭ್ಯಗಳು ನಷ್ಟವಾಗಿವೆ ಎಂದರು.

ಕರಾಳ ದಿನ: ವಿಜಯ ಬ್ಯಾಂಕ್ ಬೇರೆ ಬ್ಯಾಂಕ್ ಜತೆ ವಿಲೀನಗೊಂಡ ದಿನ ಕರಾವಳಿಯ ಜನರಿಗೆ ಕರಾಳ ದಿನವಾಗಲಿದೆ. ಬ್ಯಾಂಕ್ ಸ್ಥಾಪಕ ಸುಂದರ ರಾಮ ಶೆಟ್ಟರ ಆಶೋತ್ತರಗಳ ಪಾಲಿಗೂ ಅದು ಕರಾಳವಾಗಲಿದೆ. ಕೇಂದ್ರ ಸರ್ಕಾರದ ಈ ನಡೆ ಬಗ್ಗೆ ಪ್ರತಿಭಟನೆ ನಡೆಸಲಾಗಿದೆ. ದೊಡ್ಡ ಮಟ್ಟದ ಹೋರಾಟ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಮಾಜಿ ಸಚಿವ ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...