More

    ಕಲ್ಲುಗಣಿಗಾರಿಕೆಗೆ ನೀಡಿರುವ ಅನುಮತಿ ವಾಪಸ್‌ಗೆ ಪಟ್ಟು ; ನೀಲಗೊಂಡನಹಳ್ಳಿ, ಎಲೆರಾಂಪುರ ಗ್ರಾಪಂ ವ್ಯಾಪ್ತಿಯ ರೈತರಿಂದ ಬೃಹತ್ ಪ್ರತಿಭಟನೆ

    ಕೊರಟಗೆರೆ: ನೀಲಗೊಂಡನಹಳ್ಳಿ ಹಾಗೂ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 100 ಎಕರೆಗೂ ಅಧಿಕ ಜಾಗದಲ್ಲಿ
    ಕಲ್ಲುಗಣಿಗಾರಿಕೆ ನಡೆಸಲು ಸರ್ಕಾರ ನೀಡಿರುವ ಅನುಮತಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಇರಕಸಂದ್ರ ಕಾಲನಿಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆ, ನೀಲಗೊಂಡನಹಳ್ಳಿ, ಎಲೆರಾಂಪುರ ಗ್ರಾಪಂ, ಮಹಿಳಾ ಸಂಘಗಳು ಹಾಗೂ ವಿದ್ಯಾರ್ಥಿಗಳು ರಸ್ತೆ ಬಂದ್ ಮಾಡಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

    ಸಿದ್ಧರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಈ ಭಾಗಗಳಲ್ಲಿ ಕಲ್ಲುಗಣಿಗಾರಿಕೆ ಮಾಡಲು ಸರ್ಕಾರ ಅನುಮತಿ ನೀಡಿದ್ದು, ಇಲ್ಲಿನ ಶಾಲೆಗಳಲ್ಲಿ ವ್ಯಾಸಂಗ ಮಾಡುವ 700ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಕೆರೆ ಮತ್ತು ಮಠದ ಪಕ್ಕದಲ್ಲಿ ಗಣಿಕಾರಿಕೆ ಮಾಡಲು ಮುಂದಾಗಿದ್ದು, ರೈತರು, ಸ್ಥಳೀಯ ನಿವಾಸಿಗಳು ಕಷ್ಟ ಅನುಭವಿಸಬೇಕಾಗುತ್ತದೆ, ಸರ್ಕಾರ ಮುಂದಾಗುವ ಅನಾನುಕೂಲ ತಪ್ಪಿಸಬೇಕು ಎಂದರು.

    ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಮಾತನಾಡಿ, ನೀಲಗೊಂಡನಹಳ್ಳಿ ಮತ್ತು ಎಲೆರಾಂಫುರ ಗ್ರಾಪಂ ವ್ಯಾಪ್ತಿಯ ಭಾಗಗಳಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆ ಕೂಡಲೇ ನಿಲ್ಲಿಸುವಂತೆ ಸರ್ಕಾರ ಆದೇಶಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನಾನಿರತರಿಂದ ಮನವಿಪತ್ರ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ನಹೀದಾ ಜಮ್ಜಮ್, ಕಲ್ಲು ಗಣಿಗಾರಿಕೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದರು.

    ತಂಗನಹಳ್ಳಿ ಕಾಶಿ ಅನ್ನಪೂರ್ಣೆಶ್ವರಿ ಸಂಸ್ಥಾನದ ಶ್ರೀ ಬಸವಲಿಂಗ ಸ್ವಾಮೀಜಿ, ಹನುಮಂತಪುರದ ನಾಗೇಂದ್ರ ಸ್ವಾಮೀಜಿ, ಕೋಳಾಲ ಜಿಪಂ ಸದಸ್ಯ ಶಿವರಾಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವತ್ಥ್ ನಾರಾಯಣ್, ಅರಕೆರೆ ಶಂಕರ್, ಎಪಿಎಂಸಿ ಅಧ್ಯಕ್ಷ ವೆಂಕಟೇಶ್‌ಮೂರ್ತಿ, ತಾಪಂ ಮಾಜಿ ಸದಸ್ಯ ಬೋರಣ್ಣ, ನೀಲಗೊಂಡನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ಕಿರಣ್‌ಕುಮಾರ್, ತಾಪಂ ಮಾಜಿ ಸದಸ್ಯ ಶ್ರೀನಿವಾಸ್, ಗ್ರಾಪಂ ಸದಸ್ಯ ಕೃಷ್ಣಮೂರ್ತಿ, ಮುಖಂಡರಾದ ನೀಲೆಶ್, ಸುರೇಶ್, ತಿಲಕ್, ರಮ್ಯಾ, ಹನುಮಂತರಾಜು, ಮಂಗಳಗೌರಮ್ಮ, ವೆಂಕಟೇಶ್ ಇದ್ದರು.

    2018ರಿಂದಲೂ ಕಲ್ಲುಗಣಿಗಾರಿಕೆಗೆ ರೂಪಿಸಿಕೊಳ್ಳುತ್ತಾ ಬಂದಿದ್ದಾರೆ. ಗಣಿಗಾರಿಕೆ ನಿಲ್ಲಿಸಲು ತಹಸೀಲ್ದಾರ್, ಜಿಲ್ಲಾಧಿಕಾರಿ, ಇಬ್ಬರು ಎಸಿಗಳಿಗೆ ಮನವಿ ಪತ್ರ ನೀಡಿದರೂ ಪ್ರಯೋಜನವಾಗಿಲ್ಲ. ಕಲ್ಲುಗಣಿಗಾರಿಕೆ ನಿಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳು ಕೂಡಲೇ ಆದೇಶಿಸಿ ಈ ಭಾಗದ ಪ್ರತಿಯೊಬ್ಬರಿಗೂ ಅನುಕೂಲ ಮಾಡಿಕೊಡಬೇಕು.
    ಡಾ.ಶ್ರೀ ಹನುಮಂತನಾಥ ಸ್ವಾಮೀಜಿ, ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts