More

    12ರಂದು ಎದುರು ಪ್ರತಿಭಟನಾ ಸಭೆ: ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್

    ಶಿವಮೊಗ್ಗ: ರಾಗಿಗುಡ್ಡದಲ್ಲಿ ಹಿಂದುಗಳ ಮನೆ ಮೇಲೆ ಕಲ್ಲು ತೂರಾಟ ಮಾಡಿರುವುದನ್ನು ಖಂಡಿಸಿ ಮತ್ತು ಗಲಾಟೆ ಪ್ರಕರಣದಲ್ಲಿ ಅಮಾಯಕರ ಮೇಲೆ ಕ್ರಮ ಕೈಗೊಳ್ಳುತ್ತಿರುವುದರ ಬಗ್ಗೆ ಜಾಗೃತಿ ಮೂಡಿಸಲು ಅ.12ರಂದು ಬೆಳಗ್ಗೆ 11ಕ್ಕೆ ಬಾಲರಾಜ ಅರಸ್ ರಸ್ತೆಯ ಮಥುರಾ ಪ್ಯಾರಡೈಸ್ ಎದುರು ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು.

    ರಾಗಿಗುಡ್ಡದಲ್ಲಿ ನಡೆದ ಗಲಾಟೆಯನ್ನು ಇಡೀ ರಾಜ್ಯವೇ ನೋಡಿದೆ. ಕಲ್ಲು ತೂರಾಟಕ್ಕೂ ಮುನ್ನ ಸರ್ಕಾರ ಯಾವುದೇ ಮುಂಜಾಗ್ರತೆ ವಹಿಸಲಿಲ್ಲ. ಘಟನೆ ಬಳಿಕ ಸಚಿವರಾದ ಮಧು ಬಂಗಾರಪ್ಪ, ರಾಮಲಿಂಗಾರೆಡ್ಡಿ, ಜಿ.ಪರಮೇಶ್ವರ್ ಸೇರಿ ಹಲವರು ಅಸಡ್ಡೆಯ ಮಾತುಗಳನ್ನಾಡಿದ್ದಾರೆ. ಶಾಂತಿ ಸುವ್ಯವಸ್ತೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಲವಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
    ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ರಾಗಿಗುಡ್ಡದಲ್ಲೂ ಅದೇ ಆಗಿದೆ. ಒಂದು ಸಮುದಾಯವನ್ನು ಓಲೈಕೆ ಮಾಡುವ ಸರ್ಕಾರ ಇದಾಗಿದೆ. ರಾಗಿಗುಡ್ಡದಲ್ಲಿ ಹಿಂದು ಮತ್ತು ಮುಸ್ಲಿಮರು ಒಟ್ಟಾಗಿಯೇ ಇದ್ದರು. ಅನೇಕ ಹಿಂದುಗಳು ಮುಸ್ಲಿಮರಿಗೆ ಮನೆ ಬಾಡಿಗೆ ನೀಡಿದ್ದಾರೆ. ಆದರೆ ಘಟನೆಯ ನಂತರ ಅವರ ನಡವಳಿಕೆಗಳೇ ಬದಲಾಗಿವೆ ಎಂದು ದೂರಿದರು.
    ಸತ್ಯಶೋಧನೆ ಸಮಿತಿ ನೇತೃತ್ವದ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷರನ್ನು ಒಳಗೊಂಡಂತೆ ಮುಖಂಡರ ಜತೆಗೂಡಿ ರಾಗಿಗುಡ್ಡದಲ್ಲಿನ ಪರಿಸ್ಥಿತಿ ಅವಲೋಕಿಸಲಾಗಿದೆ. ಹಿಂದುಗಳು ತಮ್ಮ ಆರ್ತನಾದವನ್ನು ನಮ್ಮ ನಾಯಕರ ಮುಂದೆ ಹೇಳಿಕೊಂಡಿದ್ದಾರೆ. ಹೊರಗಡೆಯ ಶಕ್ತಿಗಳು ಇದಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಎಲ್ಲ ಘಟನೆಗಳನ್ನು ಖಂಡಿಸಿ ಪ್ರತಿಭಟನೆ ಮತ್ತು ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
    ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಬಿ.ವೈ.ವಿಜಯೇಂದ್ರ, ಎಸ್.ಎನ್.ಚನ್ನಬಸ್ಪ, ಮಾಜಿ ಎಂಎಲ್‌ಸಿಗಳಾದ ಆರ್.ಕೆ.ಸಿದ್ದರಾಮಣ್ಣ, ಎಂ.ಬಿ.ಭಾನುಪ್ರಕಾಶ್ ಸೇರಿ ಜಿಲ್ಲೆಯ ಮುಖಂಡರು ಭಾಗವಹಿಸುವರು ಎಂದರು. ಪ್ರಮುಖರಾದ ಎಸ್.ದತ್ತಾತ್ರಿ, ಶಿವರಾಜ್, ಬಿ.ಕೆ.ಶ್ರೀನಾಥ್, ಹೃಷಿಕೇಶ್ ಪೈ, ಎನ್.ಕೆ.ಜಗದೀಶ್, ಇ.ವಿಶ್ವಾಸ್, ಶಶಿಧರ್, ಕೆ.ವಿ.ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts