ಚುನಾವಣೆಗೆ ಎಲ್ಲಾ ರೀತಿಯಲ್ಲಿ ಬಿಜೆಪಿ ಸಿದ್ಧ: ಜಗದೀಶ್​ ಶೆಟ್ಟರ್

ಹುಬ್ಬಳ್ಳಿ: ಚುನಾವಣಾ ದಿನಾಂಕ ಪ್ರಕಟ ಮಾಡಿರುವುದು ಸ್ವಾಗತಾರ್ಹ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷ ಸಂಘಟನೆಯ ಕುರಿತು ಸಾಕಷ್ಟು ಚಿಂತನೆ ಮಾಡಲಾಗಿದೆ. ಚುನಾವಣೆಗೆ ಎಲ್ಲಾ ರೀತಿಯಲ್ಲಿ ಬಿಜೆಪಿ ಸಿದ್ಧವಾಗಿದೆ. ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ರಾಷ್ಟ್ರೀಯ ಅಧ್ಯಕ್ಷರು ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಾರೆ ಎಂದರು.

ಯಡಿಯೂರಪ್ಪನವರ ನೇತೃತ್ವದಲ್ಲಿ ನವಕರ್ನಾಟಕ ನಿರ್ಮಾಣ ಯಾತ್ರೆ ಮಾಡಲಾಗಿದೆ. ಕೆಲವು ತಿಂಗಳಿನಿಂದ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಲಾಗಿದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಫೈನಲ್ ಮಾಡಿ ಚುನಾವಣೆಗೆ ಧುಮುಕಲಿದ್ದೇವೆ. ಬಿಜೆಪಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಲಿದೆ ಎಂಬ ಭರವಸೆಯ ಮಾತನ್ನಾಡಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *