ವಿರೋಧ ಪಕ್ಷಗಳ ಸಭೆ ಲೋಕಸಭೆ ಚುಣಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Basavaraj Bommai
Published on

ಹುಬ್ಬಳ್ಳಿ: ಜುಲೈ 17-18ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಯಾವುದೇ ರಾಜಕೀಯ ಅರ್ಥವಿಲ್ಲ. ಮುಂದಿನ ದಿನಗಳಲ್ಲಿ ಈ ರೀತಿಯ ಹಲವು ಸಭೆಗಳು ನಡೆದರು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಸೋಲಿಸುವುದು ಬಿಟ್ಟರೆ ವಿಪಕ್ಷಗಳಿಗೆ ಬೇರೆ ಯಾವುದೇ ನಿರ್ದಿಷ್ಟ ಗುರಿಯನ್ನು ಹೊಂದಿಲ್ಲ ಎಂದು ಟೀಕಿಸಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಗೆ ಯಾವುದೇ ಪ್ರಬಲ ವಿರೋಧ ಪಕ್ಷವಿಲ್ಲ. ಸಭೆಯಲ್ಲಿ ಪ್ರಾದೇಶಿಕ ಪಕ್ಷಗಳು ಭಾಗಿಯಾಗುವುದರಿಂದ ಇದರಿಂದ ಯಾವುದೇ ಉಪಯೋಗವಿಲ್ಲ ಮತ್ತು ಇದರಿಂದ ಯಾವರಿಗೂ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದಿದ್ದಾರೆ.

basavaraj bommai

ಪ್ರಧಾನಿ ಮೋದಿ ನೇತೃತ್ವದ ಆಡಳಿತದಲ್ಲಿ ರಾಷ್ಟ್ರ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಗತಿ ಸಾಧಿಸಿದೆ. ಕೋವಿಡ್​ ಸಂದರ್ಭದಲ್ಲಿ ಪ್ರಧಾನಿ ಮೋದಿ ದೇಶ ನಡೆಸಿದ ರೀತಿ ಅವರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ತಂದು ಕೊಟ್ಟಿದೆ. ದೇಶದ ಅಬೀವೃದ್ದಿ ಪ್ರಧಾನಿ ಮೋದಿ ಅವರಿಂದ ಮಾತ್ರ ಸಾಧ್ಯ ಎಂದು ಎಲ್ಲರಿಗೂ ತಿಳಿದಿದೆ.

ಮುಂದಿನ ದಿನಗಳಲ್ಲಿ ವಿರೋಧ ಪಕ್ಷಗಳ ಒಕ್ಕೂಟ ಈ ರೀತಿಯ ಹಲವು ಸಭೆಗಳು ನಡೆಸಿದ್ದರು ಸಹ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net