ನಾಗ್ಪುರ: ಲೋಕಸಭೆ ಚುನಾವಣೆಗೂ ಇಂಡಿಯಾ ಮೈತ್ರಿಕೂಟದ ಹಿರಿಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಅಭ್ಯರ್ಥಿಯಾಗಿ ಮಾಡುವುದಾಗಿ ಹೇಳಿ ಸಂಪರ್ಕಿಸಿದ್ದರು. ಆದರೆ, ನಾನು ಅವರ ಪ್ರಸ್ತಾಪವನನ್ಉ ತಿರಸ್ಕರಿಸಿದೆ ಎಂದು ಹಿರಿಯ ಬಿಜೆಪಿ ನಾಯಕ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ನಾಗ್ಪುರದಲ್ಲಿ ನಡೆದ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಗಡ್ಕರಿ, ನಾನು ನಂಬಿಕೆ ಹಾಗೂ ಪಕ್ಷಕ್ಕೆ ಅಚಲ ನಿಷ್ಠೆಯನ್ನು ಹೊಂದಿದ್ದು, ಸ್ಥಾನಮಾನಕ್ಕಾಗಿ ತತ್ವ-ಸಿದ್ದಾಂತವನ್ನು ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಇತ್ತ ಗಡ್ಕರಿ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಚರ್ಚೆಯನ್ನು ಹುಟ್ಟುಹಾಕಿದ್ದು, ತಮ್ಮನ್ನು ಸಂಪರ್ಕಿಸಿದ ನಾಯಕನ ಹೆಸರನ್ನು ಗಡ್ಕರಿ ಬಹಿರಂಗಪಡಿಸಿಲ್ಲ.
ಇದನ್ನೂ ಓದಿ: ಟ್ರೈನಿ ವೈದ್ಯೆ ಹತ್ಯೆ ಕೇಸ್; ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ನನ್ನು ಅರೆಸ್ಟ್ ಮಾಡಿದ ಸಿಬಿಐ
ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ. ನಾನು ವಿರೋಧ ಪಕ್ಷದ ನಾಯಕನನ್ನು ಕೇಳಿದೆ, ನೀವು ನನ್ನನ್ನು ಏಕೆ ಬೆಂಬಲಿಸಬೇಕು ಮತ್ತು ನಾನು ನಿಮ್ಮ ಬೆಂಬಲವನ್ನು ಏಕೆ ಸ್ವೀಕರಿಸಬೇಕು ಎಂದು ಪ್ರಶ್ನಿಸಿದೆ. ಒಬ್ಬ ವ್ಯಕ್ತಿಯ ಅಪರಾಧವು ಭಾರತೀಯ ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ ಎಂದು ನಾನು ಆತನಿಗೆ ಹೇಳಿದೆ. ಆ ನಂತರ ಆತ ನನ್ನನ್ನು ಸಂಪರ್ಕಿಸಲಿಲ್ಲ ಎಂದು ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ನಾಯಕ, ಕೇಂದ್ರ ಸಚಿವ ಗಡ್ಕರಿ ಹೇಳಿದ್ದಾರೆ.
ಸಾರ್ವತ್ರಿಕ ಚುನಾವಣೆಗೂ ಮುನ್ನ ತಮ್ಮನ್ನು ಪ್ರಧಾನಿ ಹುದ್ದೆಗೆ ಪರಿಗಣಿಸಲಾಗಿದೆ ಎಂದು ನಿತಿನ್ ಗಡ್ಕರಿ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಆದರೆ, ನಾನು ಸಂಘದ (ಆರ್ಎಸ್ಎಸ್) ಸಿದ್ಧಾಂತರಗಳೊಂದಿಗೆ ವಿವಾಹ ಮಾಡಿಕೊಂಡಿದ್ದು, ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿ ಅಲ್ಲಾ ಎಂದು ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದರು.