More

    ನಗರಸಭೆ ಸದಸ್ಯನ ಬರ್ಬರ ಹತ್ಯೆ; ಸಿಬಿಐ ತನಿಖೆಗೆ ಆಗ್ರಹಿಸಿದ ಎಐಎಡಿಎಂಕೆ

    ಚೆನ್ನೈ: ಎಐಎಡಿಎಂಕೆ ಪಕ್ಷಕ್ಕೆ ಸೇರಿದ ವಾರ್ಡ್​ ಸದಸ್ಯರೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

    ಚೆಂಗಲ್ಪಟ್ಟುವಿನ ವೆಂಕಟಮಂಗಲಂ ವಾರ್ಡ್ ಸದಸ್ಯ ಅನ್ಬರಸು ಹತ್ಯೆಯಾದ ನಗರಸಭೆ ಸದಸ್ಯ ಎಂದು ತಿಳಿದು ಬಂದಿದೆ. ಯಾವ ಕಾರಣಕ್ಕೆ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ಇತ್ತ ಅನ್ಬರಸು ಹತ್ಯೆಯಾದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಎಐಎಡಿಎಂಕೆ ಮುಖಂಡರು ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಹದಗೆಟ್ಟಿದ್ದು, ವಿರೋಧ ಪಕ್ಷದಲ್ಲಿರುವ ನಾಯಕರು ಹಾಗೂ ಮುಖಂಡರನ್ನು ಗುರಿಯಾಗಿಸಿ ಹತ್ಯೆ ಮಾಡಲಾಗುತ್ತಿದೆ. ಅನ್ಬರಸು ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

    ಇದನ್ನೂ ಓದಿ: ಡೆರಿಲ್​ ಮಿಚೆಲ್​ ಮಿಂಚಿನ ಶತಕ; ಭಾರತಕ್ಕೆ 274ರನ್​ಗಳ ಗುರಿ ನೀಡಿದ ನ್ಯೂಜಿಲೆಂಡ್

    ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಚೆಂಗಲ್ಪಟ್ಟುವಿನ ವೆಂಕಟಮಂಗಲಂ ವಾರ್ಡ್ ಸದಸ್ಯ ಅನ್ಬರಸು ಶನಿವಾರ ತಡರಾತ್ರಿ ತಮ್ಮ ಸ್ನೇಹಿತರೊಂದಿಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಅವರ ಕಾರಿನ ಮೇಲೆ ಮೊದಲಿ್ಎ ಬಾಂಬ್ ಎಸೆದಿದ್ದಾರೆ. ಬಳಿಕ ತಪ್ಪಿಸಿಕೊಳ್ಳಲು ಅವರು ಯತ್ನಿಸಿದ್ದು, ಅವರನ್ನು ಹಿಂಬಾಲಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

    ಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹತ್ಯೆಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts