More

    ಚುನಾವಣೆ ಸೋಲಿನಿಂದ ಪ್ರತಿಪಕ್ಷಗಳು ತತ್ತರಿಸಿವೆ: ಬಿಜೆಪಿ ಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

    ನವದೆಹಲಿ: ಸಂಸತ್ತಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದು, ಇತ್ತೀಚಿನ ವಿಧಾನಸಭಾ ಚುನಾವಣೆಯ ಸೋಲಿನಿಂದ ಅವರು ಕಂಗೆಟ್ಟಿದ್ದಾರೆ ಮತ್ತು ಹತಾಶೆಯಿಂದ ಸಂಸತ್ತಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಇದನ್ನೂ ಓದಿ: ಪ್ರಧಾನಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ರಾಜ್ಯಕ್ಕೆ ಬರಪರಿಹಾರ ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ

    ನವದೆಹಲಿಯಲ್ಲಿ ಮಂಗಳವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ಸಂಸತ್ತಿನಲ್ಲಿ ಪ್ರತಿಪಕ್ಷಗಳ ನಡವಳಿಕೆಯು ಅವುಗಳ ಸಂಖ್ಯೆ ಕಡಿಮೆಯಾಗುವುದನ್ನು ಖಚಿತಪಡಿಸುತ್ತದೆ ಎಂದು ಹೇಳಿದರು.

    ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿನ ಸೋಲು ಮುಂಬರುವ ಲೋಕಸಭೆ ಚುನಾವಣೆ ಏನಾಗಬಹುದೆಂಬುದನ್ನು ಖಚಿತಪಡಿಸಿದೆ. ಬಿಜೆಪಿ ಸಂಖ್ಯಾಬಲ ಹೆಚ್ಚಿಸಿಕೊಳ್ಳಲಿದೆ. ಇದರ ಅರಿವಿನಿಂದ ಪ್ರತಿಪಕ್ಷಗಳು ಅನಗತ್ಯವಾಗಿ ಸಂಸತ್​ ಅಧಿವೇಶನಕ್ಕೆ ಅಡ್ಡಿಪಡಿಸುತ್ತಿವೆ ಎಂದರು.

    ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ನಂಬಿಕೆಯಿರುವ ಪ್ರತಿಯೊಬ್ಬರೂ ಸಂಸತ್ತಿನಲ್ಲಿ ಭದ್ರತಾ ಲೋಪವನ್ನು ಒಟ್ಟಾಗಿ ಖಂಡಿಸಬೇಕಿತ್ತು ಎಂದು ಪ್ರಧಾನಿ ಹೇಳಿದರು. ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ನಂಬಿಕೆಯಿರುವ ಪಕ್ಷವು ಅದನ್ನು ಬಹಿರಂಗವಾಗಿ ಅಥವಾ ರಹಸ್ಯವಾಗಿ ಹೇಗೆ ಸಮರ್ಥಿಸಿಕೊಳ್ಳುತ್ತದೆ ಎಂದು ಅವರು ಹೇಳಿದರು.

    ತಮ್ಮ ಸರ್ಕಾರವನ್ನು ಕಿತ್ತೊಗೆಯುವುದು ಅವರ (‘ಇಂಡಿಯಾ’ ಗುಂಪು)ಗುರಿಯಾಗಿದೆ. ಆದರೆ ದೇಶದ ಉಜ್ವಲ ಭವಿಷ್ಯವನ್ನು ಖಚಿತಪಡಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಮೋದಿ ಹೇಳಿದರು.

    2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ತಮ್ಮ ಕಾರ್ಯತಂತ್ರವನ್ನು ರೂಪಿಸಲು ‘ಇಂಡಿಯಾ’ ಗುಂಪಿನ ಪಕ್ಷಗಳು ಮಂಗಳವಾರ ತಮ್ಮ ನಾಲ್ಕನೇ ಸಭೆಗೆ ತಯಾರಿ ನಡೆಸುತ್ತಿರುವಾಗ ಮೋದಿಯವರ ಹೇಳಿಕೆ ಬಂದಿದೆ.

    ಚೀನಾದಲ್ಲಿ ಪ್ರಬಲ ಭೂಕಂಪ: 111 ಜನರು ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts