More

    ಹಿಂದಿ ಸಪ್ತಾಹಕ್ಕೆ ವಿರೋಧ

    ವಿಜಯವಾಣಿ ಸುದ್ದಿಜಾಲ ಹಾವೇರಿ

    ಕರ್ನಾಟಕ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಸೆ. 14ರಂದು ಹಿಂದಿ ಸಪ್ತಾಹ ಕಾರ್ಯಕ್ರಮ ಆಚರಿಸಲು ಸೂಚಿಸಿರುವುದು ಸರಿಯಲ್ಲ. ಸ್ಥಳೀಯ ಭಾಷಾ ವೈವಿಧ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಕರವೇ ಜಿಲ್ಲಾ ಘಟಕದಿಂದ ಸೋಮವಾರ ತಹಸೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

    ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ದೇಶದಲ್ಲಿ ರಾಜ್ಯಗಳ ಒಕ್ಕೂಟ ರಚನೆಯಾಗಿದೆ. ಹಲವಾರು ಭಾಷೆ ಮತ್ತು ವಿಭಿನ್ನ ಸಂಸ್ಕೃತಿಯನ್ನು ಹೊಂದಿ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೂ ಕೇಂದ್ರ ಸರ್ಕಾರ ಹಿಂದಿಯನ್ನು ಇಡೀ ದೇಶದಲ್ಲಿ ಬೆಳೆಸುವ ಉದ್ದೇಶದಿಂದ ದೇಶದ ಎಲ್ಲ ಭಾಷೆಗಳ ಜನರ ತೆರಿಗೆ ಹಣದಲ್ಲಿ ಒತ್ತಾಯಪೂರ್ವಕವಾಗಿ ಹಿಂದಿ ಸಪ್ತಾಹ ನಡೆಸಲು ಮುಂದಾಗಿರುವುದು ಸರಿಯಲ್ಲ. ಹಿಂದಿಯೇತರರನ್ನು ದೇಶದ ಎರಡನೇ ದರ್ಜೆ ಪ್ರಜೆಗಳಂತೆ ಕೇಂದ್ರ ಕಾಣುತ್ತಿರುವುದು ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಘೊರ ಅವಮಾನವಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.

    ಈ ನೀತಿ ಮುಂದುವರಿದರೆ ಕನ್ನಡ ಭಾಷೆ ಅಡುಗೆ ಮನೆಗೆ ಸೀಮಿತಗೊಳ್ಳುವ ಅಪಾಯವೂ ಇದೆ. ಇದನ್ನು ವಿರೋಧಿಸಿ ಈಗಾಗಲೇ ಕಳೆದ ಹತ್ತು ವರ್ಷಗಳಿಂದ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ಮಾಡುತ್ತಿದೆ. ನೈರುತ್ಯ ರೈಲ್ವೆ ವಲಯದಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ನಡೆದ ಪರೀಕ್ಷೆಗಳನ್ನು ಕೇವಲ ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ನಡೆಸಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿತ್ತು. ಇದನ್ನು ವಿರೋಧಿಸಿದ್ದರಿಂದ ಆ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲಾಯಿತು. ಇದರಿಂದ ಸಾವಿರಾರು ಕನ್ನಡಿಗರು ಉದ್ಯೋಗ ಪಡೆದುಕೊಂಡಿದ್ದಾರೆ. ಕನ್ನಡಿಗರ ವಿರೋಧದ ನಡುವೆಯೂ ಹಿಂದಿ ಸಪ್ತಾಹ, ಹಿಂದಿ ದಿವಸ್ ಹೆಸರಿನಲ್ಲಿ ಕರ್ನಾಟಕದ ಕೇಂದ್ರ ಕಚೇರಿಗಳಲ್ಲಿ ಹಿಂದಿ ಹೇರುವ ಹಾಗೂ ಕನ್ನಡ ಭಾಷೆ, ಕನ್ನಡಿಗರನ್ನು ಕಡೆಗಣಿಸುವ ಕೆಲಸ ಮುಂದುವರಿದಿದೆ. ಕೇಂದ್ರ ಸರ್ಕಾರ ಕೂಡಲೆ ಇದನ್ನು ನಿಲ್ಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶವಂತಗೌಡ ದೊಡ್ಡಗೌಡ್ರ, ತಾಲೂಕಾಧ್ಯಕ್ಷ ಹಾಲೇಶ ಹಾಲಣ್ಣನವರ, ಫಕೃದ್ದೀನ ಅಂಗಡಿಕಾರ, ಚೇತನ ಕುರುಬಗೊಂಡ, ನಾಗಯ್ಯ ಹಿರೇಮಠ, ಮಾರುತಿ, ಮಂಜುನಾಥ ಕುರುಬರ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts