More

    ಸರ್ಕಾರಿ ಶಾಲೆಗಳ ವಿಲೀನಕ್ಕೆ ವಿರೋಧ

    ವಿಜಯಪುರ: ಸರ್ಕಾರಿ ಶಾಲೆಗಳ ವಿಲೀನಗೊಳಿಸುತ್ತಿರುವ ಸರ್ಕಾರದ ನಿರ್ಧಾರ ಖಂಡಿಸಿ ಎಐಡಿಎಸ್‌ಒ ಸಂಘಟನೆ ಕಾರ್ಯಕರ್ತರು ಶನಿವಾರ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸಂಘಟನೆ ಜಿಲ್ಲಾಧ್ಯಕ್ಷೆ ಸುರೇಖಾ ಕಡಪಟ್ಟಿ ಮಾತನಾಡಿ, ರಾಜ್ಯದಲ್ಲಿ ೧೩,೮೦೦ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡಬೇಕೆಂದು ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ಬಡ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಬರ ಸಿಡಿಲು ಬಡಿದಂತಾಗಿದೆ. ಸರ್ಕಾರದ ನಿರ್ಧಾರದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಶಾಶ್ವತವಾಗಿ ಶಿಕ್ಷಣದಿಂದ ದೂರ ಉಳಿಯುವಂತಾಗುತ್ತದೆ. ಶಾಲೆಗಳನ್ನು ವಿಲೀನ ಮಾಡಲು ಸರ್ಕಾರ ಹೇಳುತ್ತಿರುವ ಕಾರಣಗಳು ಸರ್ಕಾರಿ ಶಾಲೆಗಳಲ್ಲಿ, ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ದಾಖಲಾತಿ ಪ್ರಮಾಣ ಕುಸಿಯುತಿದೆ ಹಾಗಾಗಿ ದಾಖಲಾತಿ ೨೫ಕ್ಕಿಂತ ಕಡಿಮೆ ಇರುವ ಶಾಲೆಗಳನ್ನು ಒಂದೇ ಸ್ಥಳದಲ್ಲಿ ಸೇರಿಸಿ ದೊಡ್ಡ ಶಾಲೆಯೊಂದಿಗೆ ವಿಲೀನ ಮಾಡಲಾಗುತ್ತದೆ. ಸರ್ಕಾರವೇ ಒಪ್ಪಿಕೊಂಡAತೆ ಶಾಲೆಗಳಲ್ಲಿ ಮೂಲ ಸೌಕರ್ಯದ ಕೊರತೆ ಇದೆ ಎಂದರು.

    ಸಂಘಟನೆ ಮುಖಂಡೆ ಸ್ನೇಹಾ ಕಟ್ಟಿಮನಿ ಮಾತನಾಡಿ, ಸರ್ಕಾರದ ಅಂಕಿ ಅಂಶಗಳ ಪ್ರಕಾರ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೩೫ ಸಾವಿರ ಶಿಕ್ಷಕರ ಕೊರತೆ ಮತ್ತು ಅವುಗಳಲ್ಲಿ ೪೭೬೭ ರಷ್ಟು ಒಬ್ಬರೇ ಶಿಕ್ಷಕರಿರುವ ಶಾಲೆಗಳಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಬ್ಬ ಸಹ ಶಿಕ್ಷಕರು ಇಲ್ಲದ ಶಾಲೆಗಳಿವೆ. ಒಂದು ಶಾಲೆಗೆ ೦೫ ಮತ್ತು ೧೦ ಮಕ್ಕಳು ದಾಖಲಾಗುತ್ತಿರುವ ಅಂಶಗಳು ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಗಳ ಗುಣಮಟ್ಟ ಏರಿಸಲು ಸರ್ಕಾರಗಳು ಏಕೆ ಕ್ರಮ ವಹಿಸುತ್ತಿಲ್ಲ ? ಸರ್ಕಾರಿ ಶಾಲೆಗಳ ಅಭಿವೃದ್ಧಿ ಏಕೆ ಸರ್ಕಾರದ ಆದ್ಯತೆ ಆಗುತ್ತಿಲ್ಲ ? ಶಾಲೆಗಳ ವಿಲೀನ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಆಗುತ್ತದೆಯೇ? ಎಂದು ಪ್ರಶ್ನಿಸಿದರು.

    ಕಡಿಮೆ ದಾಖಲಾತಿ ಇರುವ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವ ಮೂಲಕ ಮಾದರಿ ಶಾಲೆ ರಚಿಸುತ್ತೇವೆ ಎಂಬ ನಿಲುವಿನ ಹಿಂದೆ ಶಾಶ್ವತವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವಿದೆ ಎಂಬುದು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಈ ಅಪಾಯವನ್ನು ನಾವು ಕಡೆಗಣಿಸಲು ಸಾಧ್ಯವಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

    ಸರ್ಕಾರಿ ಶಾಲೆಗಳನ್ನು ಮುಚ್ಚುಲು ಮುಂದಾಗುತ್ತಿರುವುದನ್ನು ಕೈಬಿಡಬೇಕು. ಆರ್ಥಿಕ ಸ್ವಾಯತ್ತತೆಯ ಹೆಸರಿನಲ್ಲಿ ವಿದ್ಯಾರ್ಥಿ ಶುಲ್ಕವನ್ನು ಕಾಲೇಜುಗಳ ಅಭಿವೃದ್ಧಿ ನಿಽಯಾಗಿ ಬಳಸುವ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು. ಜಿಲ್ಲೆಯಲ್ಲಿ ಸರ್ಕಾರಿ ಇಂಜಿನಿಯರಿAಗ್ ಕಾಲೇಜನ್ನು ಸ್ಥಾಪಿಸಬೇಕು. ಜಿಲ್ಲೆಯಲ್ಲಿ ಪ್ರೌಢ ಹಾಗೂ ಪದವಿಯನ್ನು ಶಿಕ್ಷಣಕ್ಕೆ ಪ್ರತ್ಯೇಕವಾಗಿ ಕಟ್ಟಡಗಳನ್ನು ನಿರ್ಮಿಸಬೇಕು. ಸಾವಿರಾರು ವಿದ್ಯಾರ್ಥಿಗಳು ಹಳ್ಳಿಗಳಿಂದ ವಿಜಯಪುರ ನಗರಕ್ಕೆ ವ್ಯಾಸಂಗ ಮಾಡಲು ಬರುತ್ತಾರೆ. ಅವರಿಗೆ ಬಸ್ ಸೌಲಭ್ಯ ಒದಗಿಸಬೇಕು. ೨೦೨೨-೨೩ ನೇ ಸಾಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಪ್ರಾರಂಭಿಸಿ, ವ್ಯವಸ್ಥೆ ಒದಗಿಸಿಬೇಕೆಂದು ಒತ್ತಾಯಿಸಿದರು.

    ಕಾವೇರಿ ರಜಪೂತ, ದೀಪಾ ವಡ್ಡರ ಮುಂತಾದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts