More

    ಅನಧಿಕೃತ ಅಂಗಡಿ ತೆರವಿಗೆ ವಿರೋಧ

    ಧಾರವಾಡ: ನಗರದ ಸೂಪರ್ ಮಾರುಕಟ್ಟೆಯಲ್ಲಿ ಭಾನುವಾರ ನಡೆದ ಅನಧಿಕೃತ ಅಂಗಡಿಗಳ ತೆರವು ಕಾರ್ಯಕ್ಕೆ ಅಂಗಡಿಕಾರರು ವಿರೋಧ ವ್ಯಕ್ತಪಡಿಸಿದರು. ಪರ್ಯಾಯ ವ್ಯವಸ್ಥೆ ಮಾಡಿದ ಬಳಿಕವೇ ಅಂಗಡಿಗಳ ತೆರವು ಮಾಡಬೇಕು ಎಂದು ಆಗ್ರಹಿಸಿದರು.
    ಈಗಾಗಲೇ 2 ಬಾರಿ ಅಂಗಡಿಗಳ ತೆರವು ಕಾರ್ಯ ನಡೆಸಿರುವ ಪಾಲಿಕೆ ಅಧಿಕಾರಿಗಳು ಭಾನುವಾರ ಜೆಸಿಬಿಯೊಂದಿಗೆ ಇನ್ನೂ ಕೆಲ ಅಂಗಡಿಗಳ ತೆರವಿಗೆ ಆಗಮಿಸಿದ್ದರು. ಆದರೆ ಎಲ್ಲ ಅಂಗಡಿಕಾರರು ಸೇರಿ ಪ್ರತಿಭಟನೆ ನಡೆಸುವ ಮೂಲಕ ತೆರವು ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸಿದರು.
    ಸ್ಥಳಕ್ಕೆ ಆಗಮಿಸಿದ ಪಾಲಿಕೆ ಮಾಜಿ ಸದಸ್ಯ ದೀಪಕ ಚಿಂಚೋರೆ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅಂಗಡಿಕಾರರ ಪ್ರತಿಭಟನೆಗೆ ಸಾಥ್ ನೀಡಿದರು. ಈ ವೇಳೆ ಪಾಲಿಕೆ ಅಧಿಕಾರಿಗಳು, ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರೂ ಕೇಳಲಿಲ್ಲ. ಪರ್ಯಾಯ ವ್ಯವಸ್ಥೆ ಕಲ್ಪಿಸಿದ ಬಳಿಕವೇ ತೆರವು ಕಾರ್ಯಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿ ಜೆಸಿಬಿ ಎದುರು ಮಲಗಿ ಹೈ ಡ್ರಾಮಾ ನಡೆಸಿದರು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು, ಪೊಲೀಸರೊಂದಿಗೆ ಪ್ರತಿಭಟನಾಕಾರರು ವಾಗ್ವಾದ ಸಹ ನಡೆಸಿದರು. ಹೀಗಾಗಿ ಪಾಲಿಕೆ ಅಧಿಕಾರಿಗಳು ಕೆಲ ಹೊತ್ತು ತೆರವು ಕಾರ್ಯಕ್ಕೆ ವಿರಾಮ ಹೇಳಿದ್ದರು.
    ಮಧ್ಯಾಹ್ನದ ಬಳಿಕ ಮತ್ತೆ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲೂ ಅಂಗಡಿಕಾರರು ವಿರೋಧ ವ್ಯಕ್ತಪಡಿಸಿದರು. ಆಗ ಪಾಲಿಕೆ ಅಧಿಕಾರಿಗಳು ಪ್ರತಿ ಅಂಗಡಿಕಾರರ ಮಾಹಿತಿ ಸಂಗ್ರಹಿಸಿ, ಮಾರುಕಟ್ಟೆ ಅಭಿವೃದ್ಧಿ ಹಾಗೂ ತೆರವು ಬಳಿಕ ಎಲ್ಲರಿಗೂ ಅಂಗಡಿ ನೀಡುವ ಮನವರಿಕೆ ಮಾಡಿಕೊಟ್ಟರು. ಆಗ ಸ್ವಯಂ ಪ್ರೇರಿತವಾಗಿ ಅಂಗಡಿ ತೆರವು ಮಾಡಿದರು.
    ಹೆಚ್ಚುವರಿ ಆಯುಕ್ತ ಸಮೀರ್ ಮುಲ್ಲಾ, ಪಾಲಿಕೆ ವಲಯ ಕಚೇರಿ ಸಹಾಯಕ ಆಯುಕ್ತರಾದ ಎಂ.ಬಿ. ಸಬರದ, ಆರ್.ಎಂ. ಕುಲಕರ್ಣಿ, ನವೀನ ಹಿರೇಮಠ, ಗಣೇಶ, ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts