More

    ತಮಿಳುನಾಡಿಗೆ ನೀರು ಹರಿಸುವುದಕ್ಕೆ ವಿರೋಧ

    ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಕನ್ನಡಸೇನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

    ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಮಾತನಾಡಿ, ಮಳೆ ಇಲ್ಲದೆ ರೈತರು ಕಂಗಾಲಾಗಿದ್ದು ಬೆಳೆ ಬೆಳೆಯಲು ಸರಿಯಾಗಿ ನೀರಿಲ್ಲದ ಪರಿಸ್ಥಿತಿ ರಾಜ್ಯದಲ್ಲಿ ಎದುರಾಗಿದೆ. ಆದರೆ ಮುಂದಿನ ಚುನಾವಣೆಯ ಲಾಭ ಗಳಿಸಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿರುವುದು ಖಂಡನೀಯ ಎಂದರು.
    ಕಾವೇರಿ ಕೊಳ್ಳದಲ್ಲಿ 122 ಟಿಎಂಸಿ ಸಂಗ್ರಹವಾಗಬೇಕಿದ್ದು ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈಗ ಕೇವಲ 50 ಟಿಎಂಸಿ ನೀರಿದೆ. ಅದನ್ನು ತಮಿಳುನಾಡಿಗೆ ಹರಿಸಬಾರದು. ರಾಜಕೀಯ ವ್ಯಕ್ತಿಗಳನ್ನು ಓಲೈಕೆ ಮಾಡಿಕೊಳ್ಳಲು ಮುಂದಾಗಿರುವುದನ್ನು ಕೈಬಿಟ್ಟು ಕೂಡಲೇ ಜನಪರ, ರೈತಪರ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
    ತಮಿಳುನಾಡಿಗೆ ನೀರು ಹರಿಸುವ ಮೂಲಕ ರಾಜ್ಯದಲ್ಲಿನ ರೈತರನ್ನು ಬೀದಿಪಾಲು ಮಾಡುವ ಪ್ರಯತ್ನ ಸರ್ಕಾರ ಮಾಡುತ್ತಿದೆ. ಕೂಡಲೇ ಈ ತೀರ್ಮಾನ ಕೈಬಿಟ್ಟು ರೈತರ ಹಿತಕಾಯಬೇಕು ಎಂದು ಹೇಳಿದರು. ಪ್ರತಿಭಟನೆಯಲ್ಲಿ ಕನ್ನಡಸೇನೆ ಜಿಲ್ಲಾ ವಕ್ತಾರ ಕಳವಾಸೆ ರವಿ, ಪದಾಧಿಕಾರಿಗಳಾದ ಜಯಪ್ರಕಾಶ್, ಸತೀಶ್, ಶಂಕರೇಗೌಡ, ದೇವರಾಜ್, ಯೋಗೀಶ್, ವಿನಯ್, ಟೋನಿ, ಮಂಜು, ಅಶೋಕ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts