ಪೊಲೀಸ್ ಇಲಾಖೆ ಮೇಲೆ ದಬ್ಬಾಳಿಕೆ: ಶಾಸಕ ಹರೀಶ್ ಪೂಂಜ ಆರೋಪ

Bel_poonja
Published on

ಬೆಳ್ತಂಗಡಿ: ಐವನ್ ಡಿಸೋಜ ಮೇಲೆ ಎಫ್‌ಐಆರ್ ದಾಖಲಿಸಲು ರಾಜ್ಯಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿ ಬೆಳ್ತಂಗಡಿಯಲಿ ಬುಧವಾರ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪ್ರತಿಭಟನೆ ನಡೆಯಿತು.

ಶಾಸಕ ಹರೀಶ್ ಪೂಂಜ ಮಾತನಾಡಿ, ಕಾಂಗ್ರೆಸ್ ಜಿಲ್ಲಾವಾರು ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ದೇಶದ್ರೋಹದ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ದೂರು ನೀಡಿದ್ದರೂ, ಈವರೆಗೆ ಎಫ್‌ಐಆರ್ ದಾಖಲಿಸಿಲ್ಲ. ಇಲಾಖೆಯ ಮೇಲೆ ಕಾಂಗ್ರೆಸ್ ದಬ್ಬಾಳಿಕೆಯಿಂದ ಪೊಲೀಸರೇ ಅಸಹಾಯಕರಾಗಿದ್ದು, ತಕ್ಷಣ ಐವನ್ ಡಿಸೋಜ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಪುಢಾರಿಗಳ ಮೇಲೆ ಕೇಸ್ ಹಾಕಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್, ಬಿಜೆಪಿ ಎಸ್‌ಟಿ ಮೋರ್ಚಾ ಅಧ್ಯಕ್ಷ ರಾಜೇಶ್, ಎಸ್‌ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ, ವಿವಿಧ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನುತ್ ಕೋಟ್ಯಾನ್ ಸ್ವಾಗತಿಸಿದರು. ಮಂಡಲ ಉಪಾಧ್ಯಕ್ಷ ಗಣೇಶ್ ಲಾಯಿಲ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net