More

    ನಿಮ್ಮ ಕಣ್ಣಿಗೊಂದು ಸವಾಲು! ಸಾಧ್ಯವಾದ್ರೆ ಈ ಚಿತ್ರದಲ್ಲಿ ಅಡಗಿರುವ ಚಿರತೆಯನ್ನು ಪತ್ತೆ ಹಚ್ಚಿ

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್​ ಇಲ್ಯೂಶನ್​) ಎಂದು ಕರೆಯುತ್ತೇವೆ.

    ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ನೀವು ಹುಲ್ಲುಗಾವಲು ಪ್ರದೇಶವನ್ನು ನೋಡಬಹುದು. ಆದರೆ, ಆ ಫೋಟೋದ ಒಂದು ಭಾಗದಲ್ಲಿ ಚಿರತೆಯೊಂದು ಅಡಗಿಕೊಂಡಿದೆ. ಬೇಟೆಗೆ ಹೊಂಚು ಹಾಕುತ್ತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಹುಲ್ಲಿನ ಬಣ್ಣ ಮತ್ತು ಚಿರತೆಯ ಬಣ್ಣಕ್ಕೆ ಸಾಮ್ಯತೆ ಇದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಚಿರತೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ನಿಮ್ಮ ಕಣ್ಣಿಗೊಂದು ಸವಾಲು! ಸಾಧ್ಯವಾದ್ರೆ ಈ ಚಿತ್ರದಲ್ಲಿ ಅಡಗಿರುವ ಚಿರತೆಯನ್ನು ಪತ್ತೆ ಹಚ್ಚಿ

    10 ಸೆಕೆಂಡ್​ ಸಮಯದಲ್ಲಿ ನೀವು ಚಿರತೆಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಚಿರತೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    ನಿಮ್ಮ ಕಣ್ಣಿಗೊಂದು ಸವಾಲು! ಸಾಧ್ಯವಾದ್ರೆ ಈ ಚಿತ್ರದಲ್ಲಿ ಅಡಗಿರುವ ಚಿರತೆಯನ್ನು ಪತ್ತೆ ಹಚ್ಚಿ

    ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

    ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಆಲಿಯಾ ಭಟ್​: ರಣಬೀರ್​ ಕಪೂರ್​ ಕುಟುಂಬಕ್ಕೆ ಮಹಾಲಕ್ಷ್ಮೀಯ ಆಗಮನ

    KGFನಲ್ಲಿ ಹಿಂಸೆಯ ವೈಭವೀಕರಣದ ಬಗ್ಗೆ ಟೀಕೆ: ಒಳ್ಳೆಯ ವಿಚಾರಗಳನ್ನು ಬೋಧಿಸಲು ಸಾಧ್ಯವಿಲ್ಲ ಎಂದ ನಟ ಯಶ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts