More

    ಕಣ್ಣಿಗೊಂದು ಸವಾಲ್​: ತರಗತಿ ಒಳಗೆ ವಿದ್ಯಾರ್ಥಿಗಳ ನಡುವೆ ಇರುವ ಶ್ವಾನವನ್ನು ಪತ್ತಹಚ್ಚುವಿರಾ?

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿ ಭ್ರಮೆ ಎಂದರೇನು?

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಮಸ್ಕ್​​ ಭಯ್ಯಾ…ಧನ್ಯವಾದ..ನನ್ನ ಹೆಸರಿನ ಮುಂದೆ ಬ್ಲೂ ಟಿಕ್ ಮತ್ತೆ ಬಂದಿದೆ: ಅಮಿತಾಭ್​ ಬಚ್ಚನ್​​

    ಮೋಜಿನ ಮಾರ್ಗ

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the dog 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಕಾಲೇಜೋಂದರ ತರಗತಿಯ ಒಳಗಿನ ಚಿತ್ರಣವನ್ನು ನೋಡಬಹುದು. ವಿದ್ಯಾರ್ಥಿಗಳು ಟೇಬಲ್​ ಮೇಲೆ ಕುಳಿತು ಪಾಠದತ್ತ ಗಮನ ಹರಿಸಿದ್ದಾರೆ. ವಿದ್ಯಾರ್ಥಿಗಳ ನಡುವೆ ಒಂದು ಶ್ವಾನ ಇದೆ. ಅದನ್ನು ಪತ್ತೆ ಹಚ್ಚಬೇಕು. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ತಕ್ಷಣಕ್ಕೆ ನಾಯಿ ಎಲ್ಲಿದೆ ಎಂದು ಗೊತ್ತಾಗುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ, ಶ್ವಾನ ಕಾಣಿಸುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ನಾಯಿ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಶ್ವಾನವನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಶ್ವಾನವನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    ಇದನ್ನೂ ಓದಿ: ಕೇರಳದಲ್ಲಿ ಪ್ರಧಾನಿ ಮೋದಿ ಕೊಲ್ಲುವುದಾಗಿ ಬೆದರಿಕೆ ಪತ್ರ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

    Spot the dog 2

    121 ಕೋಟಿ ರೂ. ಮೌಲ್ಯದ ಚಿನ್ನವಿದ್ದ ಕಂಟೈನರ್​ ಏರ್ಪೋಟ್​ನಲ್ಲಿ ಕಳವು! ಸಿಗದ ಸುಳಿವು, ಪೊಲೀಸರಿಗೆ ತಲೆನೋವು

    ಅಮಿತ್ ಷಾ ಸಾಕಷ್ಟು ಸಲಹೆ ನೀಡಿದ್ದಾರೆ… ಬಿಜೆಪಿ ಖಂಡಿತ ಅಧಿಕಾರಕ್ಕೆ ಬರುತ್ತದೆ; ಬಿಎಸ್​ವೈ

    ವರುಣದಲ್ಲಿ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದ್ದೆ: ಸಿದ್ದರಾಮಯ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts