More

    ನಿಮ್ಮ ಕಣ್ಣಿಗೊಂದು ಸವಾಲು: ಈ ಫೋಟೋದಲ್ಲಿ ಅಡಗಿರುವ ಬೆಕ್ಕನ್ನು 10 ಸೆಕೆಂಡ್​ನಲ್ಲಿ ಪತ್ತೆ ಹಚ್ಚುವಿರಾ?

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿ ಭ್ರಮೆ ಎಂದರೇನು?

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಫೇಸ್​ಬುಕ್ ಖಾತೆಯಲ್ಲಿ ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ; ಸರ್ಕಾರಿ ಶಾಲಾ ಶಿಕ್ಷಕ ಅಮಾನತ್

    ಮೋಜಿನ ಮಾರ್ಗ

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the Cat 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಮನೆಯ ಮುಂದಿರುವ ಪಾದಾಚಾರಿ ಮಾರ್ಗ ಮತ್ತು ಮನೆಯ ಗೋಡೆ ಉದಕ್ಕೂ ಸಿಮೆಂಟ್​ ಇಟ್ಟಿಗಳನ್ನು ಸಾಲಾಗಿ ಇಟ್ಟು ಅದರ ನಡುವೆ ಮಣ್ಣು ಹಾಕಿ ಗಿಡಗಳನ್ನು ಬೆಳೆದಿರುವುದನ್ನು ನೋಡಬಹುದು. ಫೋಟೋದ ಒಂದು ಭಾಗದಲ್ಲಿ ಬೆಕ್ಕೊಂದು ಅಡಗಿ ಕುಳಿತಿದೆ. ಅದನ್ನು ಪತ್ತೆ ಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಅಷ್ಟು ಸುಲಭವಲ್ಲ. ಅಡಗಿ ಕುಳಿತಿರುವುದರಿಂದ ಬೆಕ್ಕು ತಕ್ಷಣಕ್ಕೆ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಬೆಕ್ಕು ಕಾಣಿಸುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಬೆಕ್ಕು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಖಾಸಗಿ ಫೋಟೋ, ವಿಡಿಯೋಗಳನ್ನು ಹರಿಬಿಟ್ಟವರಿಗೆ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮ ತಿರುಗೇಟು!

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಬೆಕ್ಕನ್ನು ಪತ್ತೆಹಚ್ಚಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the cat 2

    ಈ ಫೋಟೋದಲ್ಲಿರುವ 6ನೇ ಬೆಕ್ಕನ್ನು 10 ಸೆಕೆಂಡ್​ನಲ್ಲಿ ಗುರುತಿಸುವಿರಾ? ಶೇ.90 ಮಂದಿಯ ಕೈಯಲ್ಲಿ ಸಾಧ್ಯವಾಗಿಲ್ಲ!

    ನಿಮ್ಮ ಕಣ್ಣಿಗೊಂದು ಸವಾಲ್​: ಈ ಚಿತ್ರಗಳಲ್ಲಿರುವ ಪ್ರಾಣಿಗಳನ್ನು ಗುರುತಿಸಿದ್ರೆ ನಿಮಗೆ ಫುಲ್​ ಮಾರ್ಕ್ಸ್​!

    ಕಣ್ಣಿಗೊಂದು ಸವಾಲ್​! ಈ ಫೋಟೋದಲ್ಲಿರೋ ಹಿಮಾಲಯನ್​ ಬೆಕ್ಕನ್ನು 10 ಸೆಕೆಂಡ್​ನಲ್ಲಿ ಗುರುತಿಸಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts