More

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ನಾಯಿಯನ್ನು ಪತ್ತೆ ಹಚ್ಚಿ!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್​ ಇಲ್ಯೂಶನ್​) ಎಂದು ಕರೆಯುತ್ತೇವೆ.

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತಾಗಿದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ನಾಯಿಯನ್ನು ಪತ್ತೆ ಹಚ್ಚಿ!

    ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ನೆಲದ ಮೇಲೆ ಬಿದ್ದಿರುವ ಮರದ ತುಂಡುಗಳ ರಾಶಿಯನ್ನು ನೋಡಬಹುದು. ಫೋಟೋದಲ್ಲಿ ಮರದ ತುಂಡುಗಳ ನಡುವೆ ಒಂದು ನಾಯಿ ಕುಳಿತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಮರದ ತುಂಡಿನ ಬಣ್ಣ ಮತ್ತು ನಾಯಿಯ ಬಣ್ಣ ಎರಡೂ ಒಂದೇ ಇದೆ. ಸೂಕ್ಷ್ಮವಾಗಿ ನೋಡಿದರೆ ಶ್ವಾನ ಇರುವುದು ಗೊತ್ತಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ನಾಯಿಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    10 ಸೆಕೆಂಡ್​ ಸಮಯದಲ್ಲಿ ನೀವು ಶ್ವಾನವನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ನಾಯಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ನಾಯಿಯನ್ನು ಪತ್ತೆ ಹಚ್ಚಿ!

    ಚಂದ್ರಯಾನದ ಅಜ್ಜನಿಗೆ ನಾಲ್ಕನೇ ವಿವಾಹ! 30ರ ಯುವತಿಯನ್ನು ವರಿಸಿದ 94ರ ಮಾಜಿ ಗಗನಯಾತ್ರಿ

    ಮತ್ತೆ ಈ ರೀತಿ ನಡೆದ್ರೆ ನಿನ್ನನ್ನು ಕೊಲ್ತೀನಿ… ಚಿರತೆ ದಾಳಿಗೆ ಮೊಮ್ಮಗ ಬಲಿ, ಅರಣ್ಯಾಧಿಕಾರಿಗೆ ತಾತನ ಎಚ್ಚರಿಕೆ

    ಬಳ್ಳಾರಿಯಲ್ಲಿ ಟಾಲಿವುಡ್ ಗಾಯಕಿ ಮಂಗ್ಲಿ ಕಾರಿನ ಗ್ಲಾಸ್ ಒಡೆದ ಪುಂಡರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts