More

    ನಿಮ್ಮ ಕಣ್ಣಿಗೊಂದು ಸವಾಲ್​: ಈ ಫೋಟೋದಲ್ಲಿರುವ ಪ್ರಾಣಿ ಯಾವುದೆಂದು ಪತ್ತೆಹಚ್ಚಿದ್ರೆ ನೀವೇ ಗ್ರೇಟ್​!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿ ಭ್ರಮೆ ಎಂದರೇನು?
    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಸುರಕ್ಷಿತ ಕ್ಷೇತ್ರಕ್ಕಾಗಿ ಕಾಂಗ್ರೆಸ್​ ನಾಯಕರ ತಲಾಷೆ: BJP ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಗೇಲಿ

    ಮೋಜಿನ ಮಾರ್ಗ
    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….
    Find the animal 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಕುರುಚಲು ಸಸ್ಯ ಬೆಳೆದಿರುವ ಹಿಮ ಪ್ರದೇಶದ ವಿಶಾಲವಾದ ಚಿತ್ರಣವನ್ನು ನೋಡಬಹುದು. ಅವುಗಳ ನಡುವೆ ಪ್ರಾಣಿಗಳ ಗುಂಪೊಂದು ಇದೆ. ಅದು ಯಾವ ಪ್ರಾಣಿಗಳು ಗುಂಪು ಎಂದು ಪತ್ತೆ ಹಚ್ಚಬೇಕು. ಆದರೆ, ಅದು ಸುಲಭವಲ್ಲ. ಏಕೆಂದರೆ, ಅಲ್ಲಿರುವ ಪ್ರಾಣಿಗಳು ಗುಂಪು ಆ ಪ್ರದೇಶದಲ್ಲೇ ಬೆರೆತು ಹೋಗಿದ್ದು, ನೋಡುಗರಿಗೆ ಗೊಂದಲ ಉಂಟು ಮಾಡುವಂತಿದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ, ಯಾವ ಪ್ರಾಣಿಗಳ ಗುಂಪು ಎಂಬುದು ಗೊತ್ತಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಪ್ರಾಣಿಗಳ ಹಿಂಡು ಯಾವುದು ಎಂದು ಹೇಳಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಕಾಲೇಜಿನ ಬಳಿ ನಿಲ್ಲಿಸದಿದ್ದಕ್ಕೆ ಬಸ್​ನಿಂದ ಹೊರ ಜಿಗಿದ್ದಿದ್ದ ಇಂಜಿನಿಯರಿಂಗ್​ ವಿದ್ಯಾರ್ಥಿನಿ ದುರಂತ ಸಾವು

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಪ್ರಾಣಿಗಳು ಗುಂಪು ಯಾವುದು ಎಂಬುದನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಗುರುತಿಸಲು ಸಾಧ್ಯವಾಗದೇ, ಯಾವುದು ಅಂತ ತಲೆ ಕೆಡಿಸಿಕೊಂಡಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Find the animal 2

    ನಿಮ್ಮ ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ಬೆಕ್ಕು ಪತ್ತೆ ಹಚ್ಚಬಲ್ಲರು!

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ನಾಯಿಯನ್ನು ಪತ್ತೆ ಹಚ್ಚಿ!

    ಹದ್ದಿನಂತೆ ತೀಕ್ಷ್ಣ ದೃಷ್ಟಿಯುಳ್ಳವರು ಮಾತ್ರ ಈ ಫೋಟೋದಲ್ಲಿರುವ ನಾಯಿ ಪತ್ತೆಹಚ್ಚಲು ಸಾಧ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts