More

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ 2 ಬೆಕ್ಕುಗಳನ್ನು ಪತ್ತೆಹಚ್ಚಿ!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿ ಭ್ರಮೆ ಎಂದರೇನು?
    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಬಿಜೆಪಿ ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪಲು ಕಾರಣವೇನು? ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು…

    ಮೋಜಿನ ಮಾರ್ಗ
    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the Cats 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಬೃಹತ್​ ಕಲ್ಲು ಬಂಡೆಯ ಫೋಟೋವನ್ನು ಕಾಣಬಹುದು. ಕಲ್ಲು ಬಂಡೆಯ ನಡುವೆ ಎರಡು ಬೆಕ್ಕುಗಳು ಕುಳಿತಿವೆ. ಆ ಬೆಕ್ಕುಗಳು ಎಲ್ಲಿವೆ ಎಂದು ಪತ್ತೆಹಚ್ಚಬೇಕು. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಬೆಕ್ಕಿನ ಬಣ್ಣ ಮತ್ತು ಬಂಡೆಯ ಬಣ್ಣ ಬಣ್ಣಕ್ಕೂ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿದ್ದು, ಬೆಕ್ಕುಗಳನ್ನು ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಬೆಕ್ಕುಗಳು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ದುಬೈ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: ಮಲಯಾಳಿ ದಂಪತಿ ಸೇರಿ 16 ಮಂದಿ ದುರಂತ ಸಾವು

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಬೆಕ್ಕುಗಳನ್ನು ಪತ್ತೆಹಚ್ಚಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the Cats 2

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ ಕೇವಲ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ಬೆಕ್ಕು ಪತ್ತೆ ಹಚ್ಚಿ

    ನಿಮ್ಮ ಕಣ್ಣಿಗೊಂದು ಸವಾಲು: ಸಾಧ್ಯವಾದ್ರೆ ಈ ಫೋಟೋದಲ್ಲಿರೋ ನೀರಿನ ಬಾಟಲ್​ ಗುರುತಿಸಿ

    ನಿಮ್ಮ ಕಣ್ಣಿಗೊಂದು ಸವಾಲು: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ಜಿಂಕೆಯನ್ನು ಪತ್ತೆಹಚ್ಚಲು ಸಾಧ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts