More

    ಕಣ್ಣಿಗೊಂದು ಸವಾಲ್​: ಕೇವಲ 5 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ ನಿಗೂಢ ಸಂಖ್ಯೆ ಪತ್ತೆಹಚ್ಚುವಿರಾ?

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿ ಭ್ರಮೆ ಎಂದರೇನು?

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: 68ನೇ ವಯಸ್ಸಿನಲ್ಲಿ ಮದ್ವೆ ಆಸೆಗೆ ಬಿದ್ದ ವೃದ್ಧನಿಗೆ ಶಾಕ್​! ತನಿಖೆ ವೇಳೆ ಕಿಲಾಡಿ ಲೇಡಿಯ ಕರಾಳತೆ ಬಯಲು

    ಮೋಜಿನ ಮಾರ್ಗ

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Find hidden number new 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಕೆಂಪು ಬಣ್ಣದಿಂದ ಕೂಡಿರುವ ಒಂದು ಚೌಕಟ್ಟು ಅಥವಾ ಫ್ರೇಮ್​ ಕಾಣಬಹುದು. ಆ ಫೋಟೋದೊಂದಿಗೆ ನಿಗೂಢ ಸಂಖ್ಯೆಗಳು ಸಹ ಬೆರೆತು ಹೋಗಿವೆ. ಆ ಸಂಖ್ಯೆಗಳು ಯಾವುವು ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಅದು ಸುಲಭದ ಮಾತಲ್ಲ. ಏಕೆಂದರೆ, ಫೋಟೋ ನಮ್ಮ ಕಣ್ಣುಗಳನ್ನೇ ಗೊಂದಲಕ್ಕೆ ದೂಡುತ್ತದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲಿರುವ ಸಂಖ್ಯೆಗಳು ಕಾಣಿಸುತ್ತವೆ. ನಿಮಗೆ 5 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಸಂಖ್ಯೆಗಳು ಯಾವುದು ಎಂಬುದನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಕೋವಿಡ್, ಪ್ರವಾಹದ ಸಮಯದಲ್ಲಿ ನೆನಪಾಗಲಿಲ್ಲವೇ?: ಶ್ರೀರಂಗಪಟ್ಟಣ ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ನಿಗೂಢ ಸಂಖ್ಯೆಯನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಸಂಖ್ಯೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತ ಹುಡುಕಾಡುತ್ತಿದ್ದರೆ, ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Find hidden number solved 2

    find hidden number-min 3

    VIDEO| ಬೈಕ್​​ ಮೇಲೆ ಕುಳಿತು ಪರಸ್ಪರ ಅಪ್ಪಿಕೊಂಡು ಲಿಪ್​ಲಾಕ್​ ​​ಮಾಡಿದ ಹುಡುಗಿಯರು!

    68ನೇ ವಯಸ್ಸಿನಲ್ಲಿ ಮದ್ವೆ ಆಸೆಗೆ ಬಿದ್ದ ವೃದ್ಧನಿಗೆ ಶಾಕ್​! ತನಿಖೆ ವೇಳೆ ಕಿಲಾಡಿ ಲೇಡಿಯ ಕರಾಳತೆ ಬಯಲು

    ಟರ್ಕಿ ಶೃಂಗಸಭೆಯಲ್ಲಿ ರಷ್ಯಾದ ಪ್ರತಿನಿಧಿಗೆ ಹೊಡೆದ ಉಕ್ರೇನಿಯನ್​ ಸಂಸದ; ವಿಡಿಯೋ ವೈರಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts