More

    ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ 10 ಸೆಕೆಂಡ್​ನಲ್ಲಿ ಫೋಟೋದಲ್ಲಿರೋ ಗೂಬೆ ಪತ್ತೆ ಮಾಡಬಲ್ಲರು!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media)ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಮೊಬೈಲ್​ನಲ್ಲಿ ಮಾತನಾಡ್ತಿದ್ದ ಮಹಿಳೆಗೆ ಮುತ್ತಿಟ್ಟು ಪರಾರಿಯಾಗಿದ್ದ ನಟೋರಿಯಸ್​ ಸೀರಿಯಲ್​ ಕಿಸ್ಸರ್ ಅಂದರ್​!

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the owl

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಮರವೊಂದರ ಕಾಂಡದ ಸ್ಪಷ್ಟ ಚಿತ್ರಣವನ್ನು ನೋಡಬಹುದು. ಕಾಂಡದ ಒಂದು ಭಾಗದಲ್ಲಿ ಒಂದು ಗೂಬೆ ಕುಳಿತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಗೂಬೆಯ ಬಣ್ಣ ಮತ್ತು ಮರದ ಕಾಂಡದ ಬಣ್ಣಕ್ಕೂ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿದ್ದು, ಗೂಬೆಯು ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಗೂಬೆ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಮಾ. 29ರಿಂದ ಏ.8ರವರೆಗೆ ಕರಗ ಉತ್ಸವ: ಮಸ್ತಾನ್ ಸಾಬ್ ದರ್ಗಾಕ್ಕೆ ಹೋಗದಂತೆ ಹಿಂದು ಸಂಘಟನೆಗಳ ಪಟ್ಟು

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಗೂಬೆಯನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಗೂಬೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the owl 1

    ಜನರ ಸೇವೆಗೆ ಅಣಿಯಾಗುತ್ತಿದ್ದ ಅಂತಿಮ ವರ್ಷದ MBBS​ ವಿದ್ಯಾರ್ಥಿನಿ ದುರಂತ ಸಾವು

    ‘ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಸದೇ ದಲಿತರಿಗೆ ಬಿಜೆಪಿ ಮೋಸ’

    ಹಿಂದುತ್ವದ ಬಗ್ಗೆ ಅವಹೇಳನ; ನಟ ಚೇತನ್ ಬಂಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts