More

    ಕಣ್ಣಿಗೊಂದು ಸವಾಲು: ಜೀನಿಯಸ್​ ಮಾತ್ರ ಝೀಬ್ರಾಗಳ ನಡುವೆ ಇರುವ ಸಿಂಹವನ್ನು ಪತ್ತೆಹಚ್ಚಬಲ್ಲರು

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿ ಭ್ರಮೆ ಎಂದರೇನು?

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ವಿಮಾನದ ಒಳಗೆ ಅಪ್ರಾಪ್ತೆಗೆ ಖಾಸಗಿ ಅಂಗ ಪ್ರದರ್ಶಿಸಿದ ಭಾರತೀಯ ಮೂಲದ ವೈದ್ಯನ ಬಂಧನ!

    ಮೋಜಿನ ಮಾರ್ಗ

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the lion 3
    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಝೀಬ್ರಾಗಳ ಗುಂಪನ್ನು ನೋಡಬಹುದು. ಅವುಗಳ ನಡುವೆ ಸಿಂಹದ ಮುಖ ಕಾಣುತ್ತದೆ. ಅದನ್ನು ಪತ್ತೆಹಚ್ಚುವುದೇ ನಿಮಗಿರುವ ಚಾಲೆಂಜ್​. ಆದರೆ, ಈ ಸವಾಲು ಅಷ್ಟು ಸುಲಭವಲ್ಲ. ಏಕೆಂದರೆ, ಝೀಬ್ರಾಗಳ ಕಪ್ಪು ಬಿಳಿ ಪಟ್ಟೆ ನಮ್ಮನ್ನು ಗೊಂದಲಕ್ಕೆ ದೂಡುತ್ತದೆ. ಮೊದಲ ನೋಟದಲ್ಲಿ ಸಿಂಹದ ಮುಖ ಕಾಣುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಸಿಂಹದ ಮುಖವನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿ ಸಿಂಹ ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಚಂದ್ರನ ಅಂಗಳದತ್ತ ಇಸ್ರೋ ಲಗ್ಗೆ: ಚಂದಮಾಮನ ಸ್ಪರ್ಶಕ್ಕೆ ಇನ್ನು 1437 ಕಿ.ಮೀ ದೂರವಷ್ಟೇ!

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಸಿಂಹದ ಮುಖ ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಸಿಂಹದ ಮುಖ ಎಲ್ಲಿದೆ ಎಂದು ಗುರುತಿಸಲು ಸಾಧ್ಯವಾಗದೇ ಪರದಾಡುತ್ತಿದ್ದರೆ, ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the Lion 2

    ವಿಮಾನದ ಒಳಗೆ ಅಪ್ರಾಪ್ತೆಗೆ ಖಾಸಗಿ ಅಂಗ ಪ್ರದರ್ಶಿಸಿದ ಭಾರತೀಯ ಮೂಲದ ವೈದ್ಯನ ಬಂಧನ!

    ಬಾಲಿವುಡ್​​ನ ಈ ನಟನಿಗೆ ಕಪಾಳಮೋಕ್ಷ ಮಾಡಿದರೆ ₹ 10 ಲಕ್ಷ ಬಹುಮಾನ ಎಂದ ಸಂಘಟನೆ: ಕಾರಣ ಹೀಗಿದೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts