More

    ಈ ಫೋಟೋದಲ್ಲಿರೋ ಕಪ್ಪೆ ಪತ್ತೆಹಚ್ಚುವಲ್ಲಿ ಶೇ. 99 ಮಂದಿ ಫೇಲ್​! ಸಾಧ್ಯವಾದ್ರೆ ನೀವು ಪತ್ತೆ ಹಚ್ಚಿ…

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ IPL ಟ್ರೋಫಿ ಪ್ರದರ್ಶನ: ಎಲ್ಲೆಲ್ಲಿ? ಎಷ್ಟೊತ್ತಿಗೆ? ಇಲ್ಲಿದೆ ಮಾಹಿತಿ…

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the frog 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ನೀವು ಕಲ್ಲುಗಳನ್ನು ಒಳಗೊಂಡಿರುವ ನೀರಿನ ಚಿತ್ರಣವನ್ನು ನೋಡಬಹುದು. ನೀರಿನ ಒಳಗೆ ಒಂದು ಕಪ್ಪೆ ಇದೆ. ಆದರೆ, ಆ ಕಪ್ಪೆಯನ್ನು ಗುರುತಿಸುವುದು ಅಷ್ಟು ಸುಲಭವಲ್ಲ. ಏಕೆಂದರೆ, ಕಪ್ಪೆಯ ಬಣ್ಣ ಮತ್ತು ಅದರ ಸುತ್ತಲೂ ಇರುವ ಕಲ್ಲಿನ ಬಣ್ಣಕ್ಕೂ ಸಾಮ್ಯಾತೆ ಇದೆ. ಹೀಗಾಗಿ ಕಪ್ಪೆ ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಕಪ್ಪೆಯನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಕಪ್ಪೆ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಜಗಳ ಆಡುವುದನ್ನು ವಿಡಿಯೋ ರೆಕಾರ್ಡ್​ ಮಾಡ್ತಿದ್ದ ಆಟೋ ಚಾಲಕನ ಕೈ ಮುರಿದ ಮಹಿಳೆ!

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಕಪ್ಪೆಯನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಕಪ್ಪೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the frog 2

    ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ನೀರು ಕುದುರೆ ಪತ್ತೆಹಚ್ಚಬಲ್ಲರು!

    ನಿಮ್ಮ ಕಣ್ಣಿಗೊಂದು ಸವಾಲು: ಸಾಧ್ಯವಾದ್ರೆ ಈ ಫೋಟೋದಲ್ಲಿರೋ ನೀರಿನ ಬಾಟಲ್​ ಗುರುತಿಸಿ

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಬಾವಲಿಗಳ ಮಧ್ಯೆ ಇರುವ ಬೆಕ್ಕು ಪತ್ತೆ ಹಚ್ಚಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts