More

    ನಿಮ್ಮ ಕಣ್ಣಿಗೊಂದು ಸವಾಲು! ಸಾಧ್ಯವಾದ್ರೆ ಈ ಫೋಟೋದಲ್ಲಿ ಅಡಗಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿ

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್​ ಇಲ್ಯೂಶನ್​) ಎಂದು ಕರೆಯುತ್ತೇವೆ.

    ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ನೀವು ಅರಣ್ಯ ಪ್ರದೇಶವನ್ನು ನೋಡಬಹುದು. ಆದರೆ, ಆ ಫೋಟೋದ ಒಂದು ಭಾಗದಲ್ಲಿ ಒಬ್ಬ ವ್ಯಕ್ತಿ ಅಡಗಿಕೊಂಡಿದ್ದಾನೆ. ಆತನ ಮುಖ ಮಾತ್ರ ಗೋಚರಿಸುತ್ತದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಅಲ್ಲಿ ನಮ್ಮ ಕಣ್ಣಿಗೆ ಸವಾಲು ಎಸೆಯುವಂತಹ ಸಾಕಷ್ಟು ಅಡೆತಡೆಗಳಿವೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ವ್ಯಕ್ತಿಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ನಿಮ್ಮ ಕಣ್ಣಿಗೊಂದು ಸವಾಲು! ಸಾಧ್ಯವಾದ್ರೆ ಈ ಫೋಟೋದಲ್ಲಿ ಅಡಗಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿ

    10 ಸೆಕೆಂಡ್​ ಸಮಯದಲ್ಲಿ ನೀವು ವ್ಯಕ್ತಿಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯಕ್ಕೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    ನಿಮ್ಮ ಕಣ್ಣಿಗೊಂದು ಸವಾಲು! ಸಾಧ್ಯವಾದ್ರೆ ಈ ಫೋಟೋದಲ್ಲಿ ಅಡಗಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿ

    ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

    ಹೈಕೋರ್ಟ್ ಉದ್ಯೋಗಿಯ ಹನಿಟ್ರ್ಯಾಪ್​ಗೆ ಯತ್ನ: ಮಹಿಳೆಯರಿಬ್ಬರು ಸೇರಿ 10 ಮಂದಿಯ ಬಂಧನ

    ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್​ ಸರಣ್​ ನೇಗಿ ವಿಧಿವಶ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts