ನಿಮ್ಮ ಕಣ್ಣಿಗೊಂದು ಸವಾಲು: ಈ ಫೋಟೋದಲ್ಲಿ ಕುರಿಗಳ ಹಿಂಡಿನ ಮಧ್ಯೆ ಇರುವ ತೋಳವನ್ನು ಪತ್ತೆ ಹಚ್ಚುವಿರಾ?

Sheep Wolf
Published on: 

ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ಕುರಿಗಳ ಹಿಂಡಿನ ನಡುವೆ ತೋಳವೊಂದು ಸೇರಿಕೊಂಡು ಬಿಟ್ಟಿದೆ. ಅದು ಎಲ್ಲಿದೆ ಅಂತಾ ನೀವು ಗುರುತಿಸಬೇಕಾಗಿದೆ. ಆದರೆ, ಗುರುತಿಸುವುದು ಅಷ್ಟು ಸುಲಭದ ಕೆಲಸವಲ್ಲ. ಇಲ್ಲಿ ನಿಮ್ಮ ಮೆದುಳಿಗೆ ಸಾಕಷ್ಟು ಕೆಲಸ ಕೊಡಬೇಕಾಗಿದೆ. ಏಕೆಂದರೆ, ಫೋಟೋದಲ್ಲಿ ಇರುವುದು ಹತ್ತಾರು ಕುರಿಗಳಲ್ಲ ಬದಲಾಗಿ ನೂರಾರು ಕುರಿಗಳು. ಅವುಗಳ ಮಧ್ಯೆ ಒಂದೇ ಒಂದು ತೋಳ ಸೇರಿಕೊಂಡಿದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ತೋಳವನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು....

10 ಸೆಕೆಂಡ್​ ಸಮಯದಲ್ಲಿ ನೀವು ತೋಳವನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯಕ್ಕೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ತೋಳವನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)