More

    ನಿಮ್ಮ ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ಬೆಕ್ಕು ಪತ್ತೆ ಹಚ್ಚಬಲ್ಲರು!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿ ಭ್ರಮೆ ಎಂದರೇನು?
    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಕೆಎಂಎಫ್‌ನೊಂದಿಗೆ ಅಮೂಲ್ ವಿಲೀನದ ನಿರ್ಧಾರ ನಾಡಿಗೆ ದ್ರೋಹ: ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಕ್ರೋಶ

    ಮೋಜಿನ ಮಾರ್ಗ
    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the cat 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಮನೆಯೊಂದರ ಒಳಾಂಗಣ ಚಿತ್ರಣವನ್ನು ನೋಡಬಹುದು. ಅಲ್ಲಿ ಟಿವಿ, ಟೇಬಲ್​ ಸೇರಿದಂತೆ ಕೆಲವೊಂದಿಷ್ಟು ವಸ್ತುಗಳು ಇವೆ. ಅಲ್ಲದೆ, ಬೆಕ್ಕೊಂದು ಅಲ್ಲಿಯೇ ಕುಳಿತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ತಕ್ಷಣಕ್ಕೆ ಬೆಕ್ಕು ಎಲ್ಲಿದೆ ಎಂದು ಗೊತ್ತಾಗುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ, ಬೆಕ್ಕು ಕಾಣಿಸುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಬೆಕ್ಕು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಜೂಜಾಟಕ್ಕೆ ಕುಮ್ಮಕ್ಕು: ಗಂಗೂಲಿ, ರೋಹಿತ್​, ಹಾರ್ದಿಕ್, ಆಮೀರ್​ ಖಾನ್ ವಿರುದ್ಧ ಪಿಐಎಲ್​ ಸಲ್ಲಿಕೆ

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಬೆಕ್ಕನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಬೆಕ್ಕನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the cat 2

    ಇದು ಡಿವೋರ್ಸ್​ ಫೋಟೋಶೂಟ್​! ಮದ್ವೆ ಬಟ್ಟೆ ಸುಟ್ಟು, ಫೋಟೋ ಹರಿದು ವಿಚ್ಛೇದನ ಸಂಭ್ರಮಿಸಿದ ಮಹಿಳೆ

    ಸಿಎಂ ಬೊಮ್ಮಾಯಿಗೆ ಎದುರಾಳಿ ಆಗುತ್ತಾರಾ ವಿನಯ್ ಕುಲಕರ್ಣಿ?

    VIDEO| ಟ್ರಾಪಿಕ್​ ಸಮಸ್ಯೆ ತಪ್ಪಿಸಲು ಮೆಟ್ರೋದಲ್ಲಿ ಪ್ರಯಾಣಿಸಿದ ನಟಿ ಹೇಮಾ ಮಾಲಿನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts