More

    ನಿಮ್ಮ ಕಣ್ಣಿಗೊಂದು ಸವಾಲು! ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ಚಿರತೆ ಪತ್ತೆಹಚ್ಚಬಲ್ಲರು

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ತಮ್ಮ ಮುಖ ತೋರಿಸಿದರೆ ಮತ ಬರುವುದಿಲ್ಲವೆಂದು ಬೊಮ್ಮಾಯಿ ಚಿತ್ರನಟರ ಮುಂದೆ ಶರಣಾಗಿದ್ದಾರೆ: ಕಾಂಗ್ರೆಸ್​​ ವ್ಯಂಗ್ಯ

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the Leapord 1

    ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ನೀವು ಅರಣ್ಯ ಪ್ರದೇಶವನ್ನು ನೋಡಬಹುದು. ಆದರೆ, ಆ ಫೋಟೋದ ಒಂದು ಭಾಗದಲ್ಲಿ ಚಿರತೆಯೊಂದು ಅಡಗಿಕೊಂಡಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಚಿರತೆ ಅವಿತು ಕುಳಿತಿದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಚಿರತೆಯನ್ನು ಪತ್ತೆ ಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಚಿರತೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಚನ್ನಪಟ್ಟಣಕ್ಕೆ ಕೈ ಅಭ್ಯರ್ಥಿ ಯಾರು? ಹುರಿಯಾಳು ಖಾತ್ರಿಯಾಗದೆ ಮುಖಂಡರು, ಕಾರ್ಯಕರ್ತರಲ್ಲಿ ಗೊಂದಲ

    10 ಸೆಕೆಂಡ್​ ಸಮಯದಲ್ಲಿ ನೀವು ಚಿರತೆಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಚಿರತೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the Leapord 2

    ನಿಮ್ಮ ಕಣ್ಣಿಗೊಂದು ಸವಾಲು: ಸಾಧ್ಯವಾದ್ರೆ ಈ ಫೋಟೋದಲ್ಲಿರೋ ನೀರಿನ ಬಾಟಲ್​ ಗುರುತಿಸಿ

    ನಿಮ್ಮ ಕಣ್ಣಿಗೊಂದು ಸವಾಲು: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ಜಿಂಕೆಯನ್ನು ಪತ್ತೆಹಚ್ಚಲು ಸಾಧ್ಯ!

    ಈ ಫೋಟೋದಲ್ಲಿರೋ ಚಿರತೆ ಪತ್ತೆಹಚ್ಚುವಲ್ಲಿ ಶೇ. 99 ಮಂದಿ ಫೇಲ್​! ಸಾಧ್ಯವಾದ್ರೆ ನೀವು ಪತ್ತೆ ಹಚ್ಚಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts