More

    ಕಣ್ಣಿಗೊಂದು ಸವಾಲ್​: ಕೇವಲ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ಬೆಕ್ಕು ಪತ್ತೆ ಹಚ್ಚಬಲ್ಲಿರಾ?

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿ ಭ್ರಮೆ ಎಂದರೇನು?
    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಮದುವೆ ಮನೆಯ ಡಿಜೆ ನಿಲ್ಲಿಸಿದ ಪೊಲೀಸ್​; ಠಾಣೆ ಎದುರು ಪ್ರತಿಭಟನೆ ಕುಳಿತ ಜೋಡಿ!

    ಮೋಜಿನ ಮಾರ್ಗ
    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the cat 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಮನೆಯೊಂದರ ಗಾಜಿನ ಕಿಟಕಿಯನ್ನು ನೋಡಬಹುದು. ಅದರ ಮುಂದೆ ಮಣ್ಣಿನ ಕುಡಿಕೆಯಲ್ಲಿರುವ ಸಸ್ಯ ಹಾಗೂ ಗಾಜಿನ ಬಾಟಲ್​ಗಳನ್ನು ಕಾಣಬಹುದು. ಫೋಟೋದ ಒಂದು ಭಾಗದಲ್ಲಿ ಬೆಕ್ಕೊಂದು ಅಡಗಿ ಕುಳಿತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ತಕ್ಷಣಕ್ಕೆ ಬೆಕ್ಕು ಎಲ್ಲಿದೆ ಎಂದು ಗೊತ್ತಾಗುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ, ಬೆಕ್ಕು ಕಾಣಿಸುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಬೆಕ್ಕು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಮೋಜಿನ ಈಜು ಜೀವಕ್ಕೆ ಕುತ್ತು ತಂದೀತು.. ಎಚ್ಚರ!: ಪ್ರತಿ ಬೇಸಿಗೆಯಲ್ಲಿ ನೂರಾರು ಜನ ನೀರುಪಾಲು, ಮಕ್ಕಳ ಮೇಲೆ ಪಾಲಕರಿಗಿರಲಿ ಹದ್ದಿನ ಕಣ್ಣು

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಬೆಕ್ಕನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಬೆಕ್ಕನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the cat 2

    ಸಾಕಷ್ಟು ದೂರುಗಳು ಬಂದ ಬೆನ್ನಲ್ಲೇ ಪ್ರೇಮಿಗಳಿಗೆ ಶಾಕ್ ನೀಡಿದ ಕಬ್ಬನ್ ಪಾರ್ಕ್ ಆಡಳಿತ ಮಂಡಳಿ!

    ನೀವು ಕೂಡ ಒಂದು ಹೆಣ್ಣಿಗೆ ಹುಟ್ಟಿದವರಲ್ಲವೇ? ಅಭಿಮಾನಿ ಕಾಮೆಂಟ್​ಗೆ ಪವನ್ ಕಲ್ಯಾಣ್​ ಮಾಜಿ ಪತ್ನಿ ಕಣ್ಣೀರು

    ನಟ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ಆ ಒಬ್ಬನಿಗಾಗಿ ಸಿಸಿಬಿ ಪೊಲೀಸರಿಂದ ತೀವ್ರ ಹುಡುಕಾಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts