More

    ನಿಮ್ಮ ಕಣ್ಣಿಗೊಂದು ಸವಾಲು: ಈ ಫೋಟೋದಲ್ಲಿ ಕಳೆದು ಹೋದ ಕೀ ಹುಡುಕಿಕೊಟ್ರೆ ನೀವೇ ಗ್ರೇಟ್​

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿಭ್ರಮ ಎಂದರೇನು?
    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಮೋಜಿನ ಮಾರ್ಗ
    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the Key 1
    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಅರಣ್ಯದಲ್ಲಿ ಮಕಾಡಾಮಿಯಾ ಬೀಜಗಳು ಮತ್ತೆ ಸಿಪ್ಪೆಗಳು ಹರಡಿರುವುದನ್ನು ನೋಡಬಹುದು. ಅವುಗಳ ನಡುವೆ ಒಂದು ಬೀಗ ಕೈ ಕಳೆದುಹೋಗಿದೆ. ಅದು ಎಲ್ಲಿದೆ ಎಂದು ಹುಡುಕುವುದೇ ನಿಮ್ಮ ಕೆಲಸ. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಏಕೆಂದರೆ, ಅಷ್ಟು ಸುಲಭವಾಗಿ ಬೀಗದ ಕೈ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಬೀಗದ ಕೈ ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಬೀಗದ ಕೈ ಹುಡುಕಬೇಕು. ನಿಮ್ಮ ಸಮಯ ಈಗ ಶುರು.

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಬೀಗದ ಕೈ ಹುಡುಕಿದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಕೀ ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the key 2

    ಮಗಳ ವಯಸ್ಸಿನವಳ ಜತೆ ಮದುವೆ: ನಟ ಅರ್ಬಾಜ್​ ಖಾನ್ ಕೊಟ್ಟ ಸಮರ್ಥನೆ ಹೀಗಿದೆ ನೋಡಿ…​

    ಹೆಂಡ್ತಿ ಅದೇನ್​ ಮ್ಯಾಜಿಕ್​ ಮಾಡಿದ್ದಾಳೋ? ತಂದೆಯ ಶಾಕಿಂಗ್​ ಹೇಳಿಕೆಗೆ ಜಡ್ಡು ಉತ್ತರ ಹೀಗಿತ್ತು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts