More

    ನಿಮ್ಮ ಕಣ್ಣಿಗೊಂದು ಸವಾಲ್​! ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ಬೆಕ್ಕು ಪತ್ತೆಹಚ್ಚಲು ಸಾಧ್ಯ

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಸಾವರ್ಕರ್ ವಿರುದ್ಧದ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು… ಇಲ್ಲವಾದರೆ ದೂರು ದಾಖಲಿಸುತ್ತೇನೆ; ರಂಜಿತ್ ಸಾವರ್ಕರ್

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the Cat 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಮನೆ ಒಳಗಾಂಣದಲ್ಲಿರುವ ದೊಡ್ಡ ಕಪಾಟಿನಲ್ಲಿ ಪುಸ್ತಕಗಳನ್ನು ಜೋಡಿಸಿರುವುದನ್ನು ನೋಡಬಹುದು. ಕಪಾಟಿನ ಪಕ್ಕದಲ್ಲಿ ಕೆಲವೊಂದಿಷ್ಟು ವಸ್ತುಗಳನ್ನು ಜೋಡಿಸಲಾಗಿದೆ. ಫೋಟೋದ ಒಂದು ಭಾಗದಲ್ಲಿ ಬೆಕ್ಕು ಕುಳಿತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭವಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಬೆಕ್ಕನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಬೆಕ್ಕು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ರಾಹುಲ್​ ಗಾಂಧಿ ಅನರ್ಹತೆ ವಿಚಾರ: ಅಮೆರಿಕ ಕೊಟ್ಟ ಪ್ರತಿಕ್ರಿಯೆ ಹೀಗಿದೆ…

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಬೆಕ್ಕನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಬೆಕ್ಕನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the Cat 2

    2022-23ನೇ ಸಾಲಿಗೆ ನೌಕರರ ಇಪಿಎಫ್​ ಠೇವಣಿಗೆ ಶೇ. 8.15 ಬಡ್ಡಿದರ ನಿಗದಿ: ಉದ್ಯೋಗಿಗಳಿಗೆ ನಿರಾಸೆ

    ಬೆಂಕಿಯಿಂದ ಪಾರಾಗಲು ಹೋಗಿ 6ನೇ ಮಹಡಿಯಿಂದ ಬಿದ್ದು ಪ್ರಾಣ ಬಿಟ್ಟ ಮಾಡೆಲ್​​

    ಸಾವರ್ಕರ್ ವಿರುದ್ಧದ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು… ಇಲ್ಲವಾದರೆ ದೂರು ದಾಖಲಿಸುತ್ತೇನೆ; ರಂಜಿತ್ ಸಾವರ್ಕರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts