More

    ಬುದ್ಧಿವಂತರಿಗೆ ಮಾತ್ರ: ಫೋಟೋದಲ್ಲಿರುವ ನಾಲ್ವರು ಮಹಿಳೆಯರಲ್ಲಿ ಕಳ್ಳಿ ಯಾರು? ಪತ್ತೆಹಚ್ಚುವವರೇ ಜೀನಿಯಸ್​!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿಭ್ರಮ ಎಂದರೇನು?
    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಮೋಜಿನ ಮಾರ್ಗ
    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the Thief 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ನಾಲ್ವರು ಮಹಿಳೆಯರು ನಿಂತಿದ್ದಾರೆ. ಎಲ್ಲರು ಮಾಲ್​ ಒಂದಕ್ಕೆ ಶಾಪಿಂಗ್​ಗೆ​ ಹೋಗಿರುವಂತೆ ಕಾಣುತ್ತದೆ. ನಾಲ್ವರು ಮಹಿಳೆಯರಲ್ಲಿ ಓರ್ವ ಮಹಿಳೆ ಕಳ್ಳಿಯಾಗಿದ್ದು, ಆಕೆ ಯಾರೆಂಬುದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಸ್ವಲ್ಪ ತಲೆಗೆ ಕೆಲಸ ಕೊಡಬೇಕಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಕಳ್ಳಿಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಕಳ್ಳಿಯನ್ನು ಪತ್ತೆಹಚ್ಚಿದ್ದರೆ, ನಿಮಗೆ ನೀವೇ ಸಾಟಿ. ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಕಳ್ಳಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. ಫೋಟೋದಲ್ಲಿ ರೌಂಡ್​ ಮಾರ್ಕ್​ ಮಾಡಿರುವ ಮಹಿಳೆ ರನ್ನಿಂಗ್​ ಶೂ ಧರಿಸಿದ್ದು, ಆಕೆ ಧರಿಸಿರುವ ಬಟ್ಟೆಗೂ ರನ್ನಿಂಗ್​ ಶೂಗೂ ಹೊಂದಾಣಿಕೆಯಾಗುವುದಿಲ್ಲ. ಹೀಗಾಗಿ ಆಕೆಯೇ ಕಳ್ಳಿ. (ಏಜೆನ್ಸೀಸ್​)

    Spot the Thief 2

    ಹೆತ್ತ ಮಗನನ್ನೇ ಕೊಂದ ಪ್ರಕರಣ: ಟಿಶ್ಯೂ ಪೇಪರ್​ ಮೇಲೆ ಸುಚನಾ ಬರೆದಿದ್ದ ಶಾಕಿಂಗ್​ ಸಂಗತಿ ಬಯಲು

    ಈ ಖ್ಯಾತ ನಟಿಯನ್ನು ಪ್ರೀತಿಸಿ ಮದ್ವೆಯಾಗಲು ಬಯಸಿದ್ರು ರಜಿನಿ! ಕೈ ಕೊಟ್ಟ ಕರೆಂಟ್​​ನಿಂದ ಲವ್​ ಫೇಲ್ಯೂರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts