More

    ಕಣ್ಣಿಗೊಂದು ಸವಾಲ್​: ತೀಕ್ಷ್ಣ ದೃಷ್ಟಿಯುಳ್ಳುವರು ಮಾತ್ರ ಝೀಬ್ರಾ ಹಿಂಡಿನ ಮಧ್ಯೆ ಇರುವ ಹುಲಿ ಪತ್ತೆಹಚ್ಚಬಲ್ಲರು!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    ಕಣ್ಣಿಗೊಂದು ಸವಾಲ್​: ತೀಕ್ಷ್ಣ ದೃಷ್ಟಿಯುಳ್ಳುವರು ಮಾತ್ರ ಝೀಬ್ರಾ ಹಿಂಡಿನ ಮಧ್ಯೆ ಇರುವ ಹುಲಿ ಪತ್ತೆಹಚ್ಚಬಲ್ಲರು!

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ನೀವು ಝೀಬ್ರಾಗಳ ಹಿಂಡನ್ನು ಕಾಣಬಹುದು. ಜೀಬ್ರಾಗಳ ಹಿಂಡಿನ ನಡುವೆ ಒಂದು ಹುಲಿ ಸೇರಿಕೊಂಡಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಹುಲಿಯ ಬಣ್ಣ ಝೀಬ್ರಾಗಳ ಬಣ್ಣಕ್ಕೆ ಸಾಮ್ಯತೆ ಇದೆ. ಚಿತ್ರದಲ್ಲಿ ಹುಲಿ ಮತ್ತು ಝೀಬ್ರಾಗಳು ಬೆರೆತ ಹೋಗಿವೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಹುಲಿ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಹುಲಿಯನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಹುಲಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    ಕಣ್ಣಿಗೊಂದು ಸವಾಲ್​: ತೀಕ್ಷ್ಣ ದೃಷ್ಟಿಯುಳ್ಳುವರು ಮಾತ್ರ ಝೀಬ್ರಾ ಹಿಂಡಿನ ಮಧ್ಯೆ ಇರುವ ಹುಲಿ ಪತ್ತೆಹಚ್ಚಬಲ್ಲರು!

    ಬರೋಬ್ಬರಿ 100 ಕೋಟಿ ರೂ. ವಂಚನೆ! ಖತರ್ನಾಕ್​ ದಂಪತಿಯ ಲಕ್ಷುರಿ ಜೀವನ ಕಂಡು ದಂಗಾದ ಪೊಲೀಸರು

    ವೇಲ್​ನಿಂದ ಕುತ್ತಿಗೆ ಬಿಗಿದು ಯುವತಿಯ ಮೃತದೇಹವನ್ನು ಡ್ರಮ್​ನೊಳಗೆ ತುಂಬಿಸಿದ ಹಂತಕರು! ಏನಿದು ಪ್ರಕರಣ?

    ಏರ್​ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ ಪ್ರಯಾಣಿಕನ ಗುರುತು ಪತ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts