More

    ರಾಜ್ಯದಲ್ಲಿ ಮತ್ತೆ ಮಳೆ ಬಿರುಸು; ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

    ಬೆಂಗಳೂರು: ರಾಜ್ಯದಲ್ಲಿ ತುಸು ಮಂಕಾಗಿದ್ದ ಮಳೆ ಮತ್ತೆ ಬಿರುಸಾಗಿದೆ.ರಾಜಧಾನಿ ಬೆಂಗಳೂರು, ಚಿಕ್ಕಮಗಳೂರಿನ ಮೂಡುಗೆರೆ, ಕೊಪ್ಪಳದ ಗಂಗಾವತಿ, ಮಂಡ್ಯದ ಮಳವಳ್ಳಿ ಹಾಗೂ ತುಮಕೂರಿನ ಮಧುಗಿರಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ವರುರ್ಣಾಭಟ ಜೋರಾಗಿತ್ತು.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜು.14ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಜು.14 ಮತ್ತು ಜು.15ರಂದು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಜು.13ರಿಂದ ಮುಂದಿನ ಮೂರು ದಿನ ಜೋರಾಗಿ ಮಳೆ ಬೀಳುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ.

    Rains

    ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಸರ್ವೀಸ್​ ರಸ್ತೆಗೆ ನುಗ್ಗಿದ ಕಂಟೇನರ್​; ತಪ್ಪಿತ್ತು ಬಾರಿ ಅನಾಹುತ

    ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ, ಧಾರವಾಡ, ವಿಜಯಪುರ, ಗದಗ, ಕಲಬುರಗಿ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಜು.1ರಿಂದ ಜು.13ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 428 ಮಿಮೀ ಮಳೆಯಾಗಬೇಕಿತ್ತು. ಆದರೆ, 320 ಮಿಮೀ ಮಳೆಯಾಗಿದ್ದು, ಶೇ.25 ಕೊರತೆಯಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದರೆ, ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.5 ಅಧಿಕ ವರ್ಷಧಾರೆಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts