More

    ಕರಾವಳಿ-ಮಲೆನಾಡಲ್ಲಿ ಆರೆಂಜ್ ಅಲರ್ಟ್; ಇನ್ನು 4 ದಿನ ಗುಡುಗು-ಮಿಂಚು ಸಹಿತ ಭಾರಿ ಮಳೆ..

    ಬೆಂಗಳೂರು: ರಾಜ್ಯದ ಹಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇದೀಗ ಚುರುಕುಗೊಂಡಿದ್ದು, ಮುಂದಿನ 4 ದಿನ ಗುಡುಗು ಮಿಂಚು ಸಹಿತ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಭಾರಿ ಮಳೆ ಬೀಳಲಿದೆ. ಶನಿವಾರವೂ ದಾವಣಗೆರೆ ಮತ್ತು ಕೊಡಗಿನಲ್ಲಿ ಸರಾಸರಿ 70 ಮಿಮೀ ಮಳೆ ಬಿದ್ದಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.1ರಿಂದ ಮೂರು ದಿನ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಆ.2 ಮತ್ತು 3ರಂದು ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

    ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ತುಮಕೂರು, ಹಾಸನ, ಮಂಡ್ಯ ಮತ್ತು ಮೈಸೂರಿನಲ್ಲಿ ಆ.2ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಅಲ್ಲೆಲ್ಲಿ ಸಾಧಾರಣ ಮಳೆ ಬೀಳಲಿದೆ.

    ಕಾಮನ್‌ವೆಲ್ತ್ ಗೇಮ್ಸ್, ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ..

    2 ಬೈಕ್​​​ಗಳ ಮಧ್ಯೆ ಭೀಕರ ಅಪಘಾತ; ಎರಡೂ ಬೈಕ್​ ಸವಾರರ ತಲೆಗೆ ಪೆಟ್ಟು, ಒಂದೇ ಹೆಸರಿನ ಇಬ್ಬರೂ ಸಾವು..

    ಬುಲೆಟ್​​ನ ಹಿಂದೊಂದು ನಂಬರ್, ಮುಂದೊಂದು ನಂಬರ್; 29 ಸಾವಿರ ರೂ. ದಂಡ, ಬೈಕ್ ಸವಾರ ಅಂದರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts