ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್

rain
Published on

ಕಾಸರಗೋಡು: ಕಾಸರಗೋಡು ವ್ಯಾಪ್ತಿಯಲ್ಲಿ 5 ದಿನ ಮಳೆ ಮುಂದುವರಿಯಲಿದ್ದು, ಜುಲೈ 18 ಹಾಗೂ 19ರಂದು ಕೇಂದ್ರ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. 24 ಗಂಟೆಗಳಲ್ಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆ ಹಠಾತ್ ಪ್ರವಾಹಗಳಿಗೆ ಕಾರಣವಾಗಲಿದ್ದು, ತಗ್ಗು ಪ್ರದೇಶ ಜಲಾವೃತವಾಗುವ ಸಾಧ್ಯತೆ ಇದೆ. ಭೂಕುಸಿತ ಸಂಭವಿರುವುದರಿಂದ ಸಾರ್ವಜನಿಕರು ಮತ್ತು ಸರ್ಕಾರಿ ಸಂಸ್ಥೆಗಳು ತೀವ್ರ ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿವಾರಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net