More

    ಅನ್ನಭಾಗ್ಯ ಯೋಜನೆ: 10 ಕೆ.ಜಿ. ಆಹಾರಧಾನ್ಯ ಉಚಿತವಾಗಿ ವಿತರಿಸಲು ಆದೇಶ

    ಬೆಂಗಳೂರು: ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳೂ 10 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ಸರ್ಕಾರ ಇಂದು ಆದೇಶ ಹೊರಡಿಸಿದೆ. ಈ ಉಚಿತ ವಿತರಣೆ ಜುಲೈ 1ಕ್ಕೆ ಅನ್ವಯವಾಗುವಂತೆ ಜಾರಿಗೆ ಬರಲಿದೆ.

    ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರವು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಹೊಂದಿರುವ ಕುಟುಂಬಕ್ಕೆ ಪ್ರತಿ ತಿಂಗಳು ಫಲಾನುಭವಿಗಳ ಪರಿಗಣನೆಗೆ ತೆಗೆದುಕೊಳ್ಳದೇ 35 ಕೆ.ಜಿ, ಆಹಾರ ಧಾನ್ಯ ಹಾಗೂ ಆದ್ಯತಾ ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯವನ್ನು ಉಚಿತವಾಗಿ ಒದಗಿಸುತ್ತಿದೆ. ಇದರ ಜತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 05 ಕೆ.ಜಿ. ಆಹಾರ ಧಾನ್ಯವನ್ನು ರಾಜ್ಯ ಸರ್ಕಾರದ ವೆಚ್ಚದಲ್ಲಿ ಉಚಿತವಾಗಿ ವಿತರಿಸಲಾಗುತ್ತಿದೆ.

    ಇದನ್ನೂ ಓದಿ: ಬೆಂಗಳೂರು ವ್ಯಾಪ್ತಿಯ ಸಂಸದರು-ಶಾಸಕರ ಸಭೆ ಕರೆದ ಡಿಸಿಎಂ: ಯಾವಾಗ ಸಭೆ, ಉದ್ದೇಶವೇನು?

    ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುತ್ತಿರುವ 5 ಕೆ.ಜಿ. ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲು ಆದೇಶಿಸಲಾಗಿದೆ.

    ರಾಜ್ಯದಲ್ಲಿ ವಿತರಿಸಲಾಗಿರುವ ಆದ್ಯತಾ ಮತ್ತು ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಒಟ್ಟು 10 ಕೆ.ಜಿ. ಆಹಾರ ಧಾನವನ್ನು ಉಚಿತವಾಗಿ ವಿತರಿಸಲು ಜೂ.2ರ ಸಚಿವ ಸಂಪುಟದ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಿದ್ದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.

    ಯುವನಿಧಿ ಯೋಜನೆ ಅನುಷ್ಠಾನಕ್ಕೆ ಆದೇಶ; ಏನಿದೆ ಷರತ್ತು? ತಪ್ಪಿಗೆ ದಂಡವೂ ಇದೆ ಎಚ್ಚರಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts