ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು

udupi dc swaroopa
Published on

ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ ಎಂದು ಸ್ವರೂಪ ಟಿ.ಕೆ ಹೇಳಿದರು.

ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ತೆಲಂಗಾಣ ಹೈದರಾಬಾದ್​ ಮೂಲದ ಕುಟುಂಬಕ್ಕೆ ಮಗುವಿನ ದತ್ತು ಆದೇಶ ನೀಡಿ ಮಾತನಾಡಿದರು. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ನಡೆಯಬೇಕು. ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿದ್ದಾರೆ ಎಂದರು. ಕಾನೂನು ಉಲ್ಲಂಘಿಸಿ ಅಥವಾ ಮಕ್ಕಳ ಮಾರಾಟ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂದಿಯವರು ಶಾಮೀಲಾಗಿದ್ದಲ್ಲಿ 1 ಲಕ್ಷ ರೂ, ದಂಡ ಹಾಗೂ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ಮಕ್ಕಳನ್ನು ಮಾರಾಟ ಮಾಡಿದವರಿಗೆ ಹಾಗೂ ಮಕ್ಕಳನ್ನು ಕೊಂಡುಕೊಂಡವರಿಗೆ 1 ಲಕ್ಷ ದಂಡ ಹಾಗೂ 5 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್​, ರಕ್ಷಣಾಧಿಕಾರಿ ಸುರಕ್ಷಾ, ಡಾಟಾ ಅನಾಲಿಸ್ಟ್​ ಕ್ಲೀಟಾ, ಉಡುಪಿ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರದ ಸಂಯೋಜಕಿ ಮೆರಿನಾ ಎಲಿಜಬೆತ್​ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net