More

    ಪ್ರತಿ ಗ್ರಾಪಂನಲ್ಲೂ ಆರೋಗ್ಯ ಶಿಬಿರ ಆಯೋಜನೆ

    ಸಾಲಿಗ್ರಾಮ: ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಉಚಿತ ಶಿಬಿರಗಳನ್ನು ನಡೆಸಲಾಗುವುದು. ನಾಗರಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಶಾಸಕ ಡಿ.ರವಿಶಂಕರ್ ಹೇಳಿದರು.

    ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಆರೋಗ್ಯ ಮತ್ತು ಹೃದ್ರೋಗ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಭಾಗಗಳಲ್ಲೂ ಆರೋಗ್ಯಕ್ಕೆ ಸಂಬಂಧಿಸಿದಂತಹ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಮಾಡಲಾಗುವುದು. ಆ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

    ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜ್ ಮಾತನಾಡಿ, ಕೆ.ಆರ್.ನಗರ ಮತ್ತು ಸಾಲಿಗ್ರಾಮ ಆಸ್ಪತ್ರೆಗಳಲ್ಲಿರುವ ಸಮಸ್ಯೆಗಳನ್ನು ಜಿಲ್ಲಾ ಆರೋಗ್ಯ ಇಲಾಖೆ ಗಮನಕ್ಕೆ ತರಲಾಗಿದೆ. ಶಾಸಕರ ಮಾರ್ಗದರ್ಶನದಲ್ಲಿ ಹಲವು ಸಭೆಗಳನ್ನು ಮಾಡಲಾಗಿದೆ. ಈಗಾಗಲೇ ವೈದ್ಯರ ಸಮಸ್ಯೆ ಬಗೆಹರಿದಿದ್ದು, ಇನ್ನುಳಿದ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದರು.

    ಶಿಬಿರದಲ್ಲಿ ದಂತ ತಪಾಸಣೆ, ನೇತ್ರ ಪರೀಕ್ಷೆ ಮತ್ತು ಚಿಕಿತ್ಸೆ, ಅಸ್ತಮಾ ಮತ್ತು ದಮ್ಮಿನ ತಪಾಸಣೆ, ಬಿಪಿ ಮತ್ತು ಸಕ್ಕರೆ ಕಾಯಿಲೆ ಪರೀಕ್ಷೆ, ರಕ್ತದ ಗುಂಪು ಪರೀಕ್ಷೆ, ಇಸಿಜಿ ಸೇರಿದಂತೆ ವಿವಿಧ ತಪಾಸಣೆ ಮಾಡಲಾಯಿತು.

    ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅಶೋಕ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿ.ರಮೇಶ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಐಶ್ವರ್ಯ, ಶ್ವೇತಾ ಭಗವಾನ್, ಲಾವಣ್ಯ ಸೇರಿದಂತೆ ಆರೋಗ್ಯ ಸಿಬ್ಬಂದಿ ಶಿಬಿರದಲ್ಲಿ ಕಾರ್ಯನಿರ್ವಹಿಸಿದರು.

    ತಾಪಂ ಮಾಜಿ ಸದಸ್ಯ ಎಲ್.ಎಂ.ಸಣ್ಣಪ್ಪ, ಗ್ರಾಪಂ ಅಧ್ಯಕ್ಷೆ ಮಣಿಲಾ ಮಂಜುನಾಥ್, ಹುಚ್ಚೇಗೌಡ, ಕೃಷ್ಣೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಶಂಕರ್, ಮಹದೇವ್, ವಕ್ತಾರ ಜಾಬೀರ್, ರೂಪಾ ಮಂಜುನಾಥ್, ಯೋಗೇಶ್, ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸಯ್ಯದ್ ಅಹಮದ್, ಸುದೀಪ್, ರಂಗೇಗೌಡ, ಅನಿಲ್, ಪಾಪಣ್ಣ, ಪ್ರತಾಪಾಚಾರಿ, ಎಂ.ಎಲ್.ಪುನೀತ್, ಮೂರ್ತಿ, ದೀಪು, ಡೇರಿ ಕೃಷ್ಣೇಗೌಡ, ಮಹೇಶ್, ಅಣ್ಣಯ್ಯ, ಮುಖ್ಯಶಿಕ್ಷಕ ಲೋಹಿತಾಶ್ವ, ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ್ ಹಲವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts