More

    ಗ್ರಾಪಂ ಮಟ್ಟದಲ್ಲಿ ಜನಸ್ಪಂದನಾ ಸಭೆ ಆಯೋಜನೆ

    ಕಡೂರು: ಜನಸ್ನೇಹಿ ಆಡಳಿತ ನೀಡಬೇಕು ಎಂಬ ಆಶಯದೊಂದಿಗೆ ಬರುವ ದಿನಗಳಲ್ಲಿ ಗ್ರಾಪಂ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಲು ಜನಸ್ಪಂದನಾ ಸಭೆಗಳನ್ನು ಆಯೋಜಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
    ತಾಲೂಕಿನ ಸಿಂಗಟಗೆರೆಯಲ್ಲಿ ವಿವಿಧ ಸರ್ಕಾರಿ ಕಟ್ಟಡಗಳ ಉದ್ಘಾಟನೆ ಮತ್ತು ಸಿಂಗಟಗೆರೆ-ಪಂಚನಹಳ್ಳಿ ರಸ್ತೆ ಅಭಿವೃದ್ಧಿಗಾಗಿ 45 ಲಕ್ಷ ರೂ.ವೆಚ್ಚದ ರಸ್ತೆ ನಿರ್ವಹಣಾ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ನಂತರ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಸಿಂಗಟಗೆರೆ- ಕೆ.ಬಿದರೆ ರಸ್ತೆ ಅಭಿವೃದ್ಧಿಗೆ ಎಸ್‌ಎಸ್‌ಡಿಪಿ ಯೋಜನೆಯಡಿ 20 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ. ಕ್ಷೇತ್ರದಲ್ಲಿ ವಿವಿಧ ದೇವಾಲಯಗಳ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ನೀಡಲಾಗಿದ್ದು, ಇನ್ನಷ್ಟು ದೇವಾಲಯಗಳ ಅಭಿವೃದ್ಧಿಗಾಗಿ ಹೆಚ್ಚುವರಿಯಾಗಿ 5 ಕೋಟಿ ರೂ. ಹಾಗೂ ಕಡೂರು ಬಸ್‌ನಿಲ್ದಾಣ ನಿರ್ಮಾಣಕ್ಕೆ 1.25 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
    ಕಡೂರು ಪಟ್ಟಣದ ಎರಡು ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ನೀಲಿ ನಕ್ಷೆ ಸಿದ್ದಗೊಂಡಿದೆ. ಹಾಗಾಗಿ ಕ್ಷೇತ್ರದ ಅಭಿವೃದ್ಧಿಯ ಅವಲೋಕನ ಮಾಡುವುದು ತಪ್ಪು. ನಮಗೆ ಇನ್ನೂ ಸಾಕಷ್ಟು ಸಮಯಾವಕಾಶವಿದ್ದು, ಕ್ಷೇತ್ರವನ್ನು ವಿವಿಧ ಆಯಾಮಗಳಲ್ಲಿ ಅಭಿವೃದ್ಧಿಗೊಳಿಸಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
    ಗ್ರಾಮೀಣ ಭಾಗಗಳಲ್ಲಿ ಕೆಲವು ಇಲಾಖೆಗಳ ಸಣ್ಣ-ಪುಟ್ಟ ಸಮಸ್ಯೆಗಳ ಬಗ್ಗೆ ಜನರು ಗಮನಕ್ಕೆ ತಂದಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಹೋಬಳಿ ಕೇಂದ್ರಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಸಿಂಗಟಗೆರೆ ಕ್ಷೇತ್ರ ಐತಿಹಾಸಿಕ ಮತ್ತು ಧಾರ್ಮಿಕ ಕ್ಷೇತ್ರವಾಗಿದ್ದು, ಸಿಂಗಟಗೆರೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts