More

    ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸೂಚನೆ; ಸಂವಿಧಾನ ಜಾಗೃತಿ ಜಾಥಾ ಅಚ್ಚುಕಟ್ಟಾಗಿ ನಿರ್ವಹಿಸಿ

    ಧಾರವಾಡ: ಜಿಲ್ಲೆಯಾದ್ಯಂತ ಜ. ೨೬ರಿಂದ ಫೆ. ೨೪ರವರೆಗೆ ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಜಿಲ್ಲೆಯ ೧೪೬ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಲ ಅಽಕಾರಿಗಳು ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರ ಜಾಥಾವನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
    ನಗರದ ಜಿಲ್ಲಾಽಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಕುರಿತು ಅಽಕಾರಿಗಳು ಹಾಗೂ ವಿವಿಧ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಸಂವಿಧಾನದಿAದಲೇ ಭಾರತದ ಸರ್ವಾಂಗೀಣ ಅಭಿವೃದ್ಧಿ ಎಂಬ ಸಂದೇಶವನ್ನು ಎಲ್ಲರಿಗೂ ತಿಳಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಗ್ರಾಮ ಪಂಚಾಯತಿ ಕೇಂದ್ರಸ್ಥಾನ ಹಾಗೂ ನಗರ ಪಟ್ಟಣಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
    ಸAವಿಧಾನ ಜಾಗೃತಿ ಜಾಥಾ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಲಿದೆ. ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ಕಡ್ಡಾಯವಾಗಿ ಆಚರಿಸಬೇಕು. ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಗುವುದು ಎಂದರು.
    ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಬಕಾಷ ಎಂ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಜಿಲ್ಲಾಽಕಾರಿ ಸ್ವರೂಪ ಟಿ.ಕೆ., ಉಪ ಪೊಲೀಸ್ ಆಯುಕ್ತ ರಾಜೀವ ಎಂ. ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts