

ಸಿದ್ದಾಪುರ: ಸಿದ್ದಾಪುರ ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್, ಸಿಎಂಎ ಓರಿಯಂಟೇಶನ್ ಪ್ರವೇಶ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಓರಿಯಂಟೇಶನ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಸಿಎ ಮಹೀಂದ್ರ ಶೆಣೈ, ಸಿಎಸ್ ಸಂತೋಷ್ ಪ್ರಭು ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಶೈಲಿಯಲ್ಲಿ ಮಾತನಾಡಿದರು. ಈ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ, ತಯಾರಿ ವಿಧಾನ, ವಿದ್ಯಾರ್ಥಿಗಳು ಅನುಸರಿಸಬಹುದಾದ ಅಭ್ಯಾಸ ಕ್ರಮಗಳ ಬಗ್ಗೆ ವಿಶ್ಲೇಷಣೆ ನೀಡಿದರು.
ಸುಮುಖ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಉಪ ಪ್ರಾಂಶುಪಾಲ ಹರ್ಷ ಶೆಟ್ಟಿ, ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗ ಮುಖ್ಯಸ್ಥ ಜಗದೀಶ್ ಸ್ವಾಗತಿಸಿದರು. ಹರ್ಷ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಗಾಯತ್ರಿ ಸೋಮಯಾಜಿ ಕಾರ್ಯಕ್ರಮ ನಿರೂಪಿಸಿದರು. ನಾಗಶ್ರೀ ವಂದಿಸಿದರು.