ಕುಶಾಲನಗರ:
ಇಲ್ಲಿನ ಅನುಗ್ರಹ ಪದವಿ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ಮತ್ತು ಬಿಸಿಎ ವಿದ್ಯಾರ್ಥಿಗಳಿಗೆ ಮಂಗಳವಾರ ‘ಓರಿಯಂಟೇಶನ್’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಿಂಗಮೂರ್ತಿ, ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಉತ್ತಮ ಗುಣನಡತೆಯನ್ನು ಮೈಗೂಡಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಬೇಕೆಂದರು.
ಉಪನ್ಯಾಸಕ ನೌಶದ್ ಕಾಲೇಜಿನ ನಿಯಮಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಇದೇ ಸಂದರ್ಭ ನಿಶಾಮುಕ್ತ ಭಾರತ್ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪಾರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ನಂತರ ವಿದ್ಯಾರ್ಥಿಗಳು ತಾವು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುವುದಿಲ್ಲ ಎಂದು ಪ್ರಮಾಣ ವಚನ ಸ್ವೀಕರಿಸಿದರು.