More

    ಪ್ರಜಾಪ್ರಭುತ್ವ ರಕ್ಷಣೆಗೆ ಕಡ್ಡಾಯ ಮತದಾನ ಮಾಡಬೇಕು

    ಚಿಕ್ಕಮಗಳೂರು: ದೇಶ ಹಾಗೂ ಸಂವಿಧಾನದ ರಕ್ಷಣೆಗಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಮತ್ತು ರಾಜ್ಯದಲ್ಲಿ ಅತಿ ಹೆಚ್ಚು ಮತದಾನವಾಗುವಂತೆ ಮಾಡಬೇಕೆಂದು ಗುರಿ ಹೊಂದಲಾಗಿದೆ ಎಂದು ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಬಿ.ಗೋಪಾಲಕೃಷ್ಣ ತಿಳಿಸಿದರು.

    ನಗರದ ಕೋಟೆ ವೃತ್ತದಲ್ಲಿ ಮತದಾನ ಜಾಗೃತ ಸಮಿತಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಆಯೋಜಿಸಲಾಗಿದ್ದ ಗೋಡೆ ಬರಹ, ಟ್ರ್ಯಾಕ್ಟರ್, ಬೈಕ್ ಜಾಥ ಮತ್ತು ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾನದ ಬಗ್ಗೆ ಅರಿವು ಮೂಡಿಸುವ ಸಂಬಂಧ ಆಯೋಜಿಸಲಾಗಿರುವ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಹೇಳಿದರು.
    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳುರು ಕ್ಷೇತ್ರದಲ್ಲಿ ಮತದಾನದ ಪ್ರಮಾಣವನ್ನು ಶೇ. ೮೫ರಷ್ಟಕ್ಕೆ ಏರಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಪೂರಕವಾಗಿ ಸಾರ್ವಜನಿಕರು ಏ. ೨೬ರಂದು ಮತಗಟ್ಟೆಗಳಿಗೆ ಆಗಮಿಸಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
    ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯಲ್ಲಿ ಮತದಾರರು ಅರ್ಥಪೂರ್ಣವಾಗಿ ಆಚರಿಸಬೇಕು. ಈ ಮೂಲಕ ದೇಶದ ಅಭಿವೃದ್ಧಿಗೆ ಸೂಕ್ತ ಅಭ್ಯರ್ಥಿಯನ್ನು ಮತದಾರರು ಯಾವುದೇ ಆಮಿಷಗಳಿಲ್ಲದೆ ಆಯ್ಕೆ ಮಾಡಬೇಕು ಎಂದು ಹೇಳಿದರು.
    ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸುಮಾರು ೩೧೭ ಹಳ್ಳಿಗಳನ್ನು ಗುರುತಿಸಿದ್ದು, ಅಲ್ಲಿ ನಿರೀಕ್ಷಿಸಿದಂತೆ ಸಮಸ್ಯೆಯಾಗುತ್ತಿದೆ. ಇಲ್ಲಿನ ನೀರಿನ ಸಮಸ್ಯೆ ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡು ಟ್ರ್ಯಾಕ್ಟರ್ ಮೂಲಕ ಕುಡಿಯುವ ನೀರಿನ ಸರಬರಾಜು ಮಾಡುತ್ತಿದ್ದೇವೆ ಎಂದು ಹೇಳಿದರು.
    ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಸುಜಾತ ಮಾತನಾಡಿ, ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಅಂಗವಾಗಿ ಕೃಷಿ-ತೋಟಗಾರಿಕೆ ಇಲಾಖೆಯಿಂದ ಟ್ರ್ಯಾಕ್ಟರ್ ಜಾಥ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನವಾಗಬೇಕೆಂಬ ಉದ್ದೇಶ ಹೊಂದಾಗಿದೆ ಎಂದರು.
    ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts