More

    ಅಭಿವೃದ್ಧಿ ಕಾರ್ಯಕ್ಕಿಂತ ಗ್ಯಾರಂಟಿ ಜಾರಿಗೇ ನಮ್ಮ ಮೊದಲ ಆದ್ಯತೆ: ಸಚಿವ ಡಾ.ಜಿ. ಪರಮೇಶ್ವರ್

    ತುಮಕೂರು: ಅಭಿವೃದ್ಧಿ ಕಾರ್ಯಕ್ಕಿಂತ ಗ್ಯಾರಂಟಿ ಜಾರಿಗೇ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಇಂದು ಅವರು ಸುದ್ದಿಗಾರರ ಜತೆ ಮಾತನಾಡುತ್ತ ಈ ವಿಷಯ ತಿಳಿಸಿದರು.

    ಗ್ಯಾರಂಟಿ ಅನುಷ್ಠಾನವೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿತ್ತು. ಹಾಗಾಗಿ ಈ ಬಾರಿಯ ಬಜೆಟ್​​ನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಮೀಸಲಿಡಲು ಆಗಲಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು 52 ಸಾವಿರ ಕೋಟಿ ರೂ. ಬೇಕಾಗುತ್ತದೆ. ಆದ್ದರಿಂದ ನಾವು ಮಂಡಿಸಿದ್ದ ಬಜೆಟ್​ನಲ್ಲಿ ಅಭಿವೃದ್ಧಿ ಕಾರ್ಯದ ಹೊಸ ಕಾಮಗಾರಿಗೆ ಹಣ ನೀಡಲು ಆಗಲಿಲ್ಲ. ಹಳೇ ಕಾಮಗಾರಿಗಳಿಗೆ ಮಾತ್ರ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

    ಇದನ್ನೂ ಓದಿ: ಬೆಂಗಳೂರಿನ ಎಲ್ಲ ಆಸ್ತಿಗಳ ದಾಖಲೆ ಸಂಗ್ರಹಿಸಿ ಸ್ಕ್ಯಾನ್​ ಮಾಡಲಿದೆ ಸರ್ಕಾರ: ಉದ್ದೇಶ ಏನೆಂದು ತಿಳಿಸಿದ ಡಿಸಿಎಂ

    ಕಾಂಗ್ರೆಸ್​ ಚುನಾವಣಾಪೂರ್ವದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಐದು ಭರವಸೆಗಳನ್ನು ನೀಡಿದ್ದು, ಅಧಿಕಾರಕ್ಕೆ ಬಂದರೆ ಅವುಗಳನ್ನು ಗ್ಯಾರಂಟಿ ಜಾರಿಗೆ ತರುವುದಾಗಿ ಹೇಳಿತ್ತು. ಅದರಂತೆ ಐದು ಗ್ಯಾರಂಟಿಗಳ ಪೈಕಿ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಜಾರಿಗೆ ತಂದಿದ್ದು, ಗೃಹಲಕ್ಷ್ಮಿ ಹಾಗೂ ಯುವನಿಧಿ ಇನ್ನೇನು ಜಾರಿಗೆ ಬರಲಿವೆ.

    ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?

    ನೇರಳೆ ಹಣ್ಣುಗಳನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ?: ಆರೋಗ್ಯಕ್ಕೇನು ತೊಂದರೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts