23.2 C
Bangalore
Saturday, December 14, 2019

ಬಿಸಿಪಿ ಸೋಲಿಸುವುದೇ ನಮ್ಮ ಗುರಿ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ವಿಜಯವಾಣಿ ಸುದ್ದಿಜಾಲ ಹಿರೇಕೆರೂರ

ಹಿರೇಕೆರೂರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಬೇಕಿರಲಿಲ್ಲ. ಪಕ್ಷಕ್ಕೆ ಹಾಗೂ ಮತದಾರರಿಗೆ ಮೋಸ ಮಾಡಿ ಸರ್ಕಾರ ಕೆಡವಲು ಕಾರಣರಾದವರನ್ನು ಇಲ್ಲಿನ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಶುಕ್ರವಾರ ಜರುಗಿದ ಕಾಂಗ್ರೆಸ್ ಕಾರ್ಯಕರ್ತರ ಸಭೆ, ರಟ್ಟಿಹಳ್ಳಿ, ಹಿರೇಕೆರೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಕ್ಷೇತ್ರ ಮೌಲ್ಯಾಧಾರಿತ ರಾಜಕೀಯಕ್ಕೆ ಹೆಸರುವಾಸಿಯಾಗಿದೆ. ಮತದಾರರ ಮೌಲ್ಯದಿಂದ ಇಲ್ಲಿ ಚುನಾವಣೆ ನಡೆಯುತ್ತದೆ. ಇಂತಹ ಕ್ಷೇತ್ರಕ್ಕೆ ದ್ರೋಹವೆಸಗಿದ ಬಿ.ಸಿ. ಪಾಟೀಲರು, ಜನರ ಎದುರು ಸ್ಪಷ್ಟ ಹಾಗೂ ಧೈರ್ಯವಾಗಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಅವರನ್ನು ಮುಂಬರುವ ಚುನಾವಣೆಯಲ್ಲಿ ಸೋಲಿಸುವುದೇ ನಮ್ಮ ಮುಖ್ಯ ಗುರಿಯಾಗಬೇಕು. ಕಾಂಗ್ರೆಸ್ ಅಭ್ಯರ್ಥಿ ಯಾರೇ ಆಗಲಿ ಅವರ ಗೆಲುವಿಗೆ ಎಲ್ಲರೂ ಒಮ್ಮತದಿಂದ ಶ್ರಮಿಸಬೇಕು ಎಂದರು.

ವಿಧಾನಸಭೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಮಾತನಾಡಿ, ಕಾಂಗ್ರೆಸ್​ನಲ್ಲಿ ಪಕ್ಷ ನಿಷ್ಠರಿಗೆ, ಸಂಘಟನಾಕಾರರಿಗೆ ಯಾವತ್ತೂ ಬೆಲೆ ಇದೆ. ಸೂಕ್ತ ಸಮಯದಲ್ಲಿ ಒಳ್ಳೆಯ ಸ್ಥಾನಮಾನಗಳು, ಅಧಿಕಾರ ಸಿಕ್ಕೇ ಸಿಗುತ್ತದೆ. ರಾಜ್ಯದಲ್ಲಿ ಅತಿವೃಷ್ಟಿಯಾಗಿ ಅಪಾರ ಆಸ್ತಿ, ಬೆಳೆ, ಪ್ರಾಣ ಹಾನಿ ಸಂಭವಿಸಿದೆ. ಆದರೆ, ಸೌಜನ್ಯಕ್ಕಾದರೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಬಂದು ಸಮೀಕ್ಷೆ ನಡೆಸಲಿಲ್ಲ. ಸೂಕ್ತ ಪರಿಹಾರ ಘೊಷಣೆ ಮಾಡಿಲ್ಲ. ದೇಶದ ಆರ್ಥಿಕ ಸ್ಥಿತಿಯನ್ನು ಅಧೋಗತಿಗೆ ತಂದು ನಿಲ್ಲಿಸಿದ್ದಾರೆ ಎಂದು ಟೀಕಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಮಾಜಿ ಸಂಸದ ಐ.ಜಿ. ಸನದಿ, ಜಿ.ಪಂ. ಅಧ್ಯಕ್ಷ ಎಸ್.ಕೆ. ಕರಿಯಣ್ಣನವರ, ಇತರರು ಮಾತನಾಡಿದರು.

ರಟ್ಟಿಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ ಮಡಿವಾಳರ, ಹಿರೇಕೆರೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಡಿ. ಬಸನಗೌಡ್ರ ಅವರನ್ನು ಪಕ್ಷದ ಧ್ವಜ ನೀಡಿ ಸನ್ಮಾನಿಸಿ ಅಧಿಕಾರ ವಹಿಸಲಾಯಿತು.

ಮಾಜಿ ಸಚಿವರಾದ ಎ.ಎಂ. ಹಿಂಡಸಗೇರಿ, ಮನೋಹರ ತಹಶೀಲ್ದಾರ್, ರುದ್ರಪ್ಪ ಲಮಾಣಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ, ಜಿ.ಪಂ. ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸಗಣ್ಣಿ, ಮಾಜಿ ಸದಸ್ಯ ಬಿ.ಎನ್. ಬಣಕಾರ, ಎಪಿಎಂಸಿ ಅಧ್ಯಕ್ಷ ವಸಂತ ದ್ಯಾವಕ್ಕಳವರ, ಎಸ್.ಬಿ. ತಿಪ್ಪಣ್ಣವರ, ಡಾ. ಮಲ್ಲೇಶ ಹುಲ್ಮನಿ, ಸಲೀಂ ಮುಲ್ಲಾ, ಶ್ರೀನಿವಾಸ ಹಳ್ಳಳ್ಳಿ, ಇತರರು ಇದ್ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಡಿ. ಬಸನಗೌಡ್ರ, ರಮೇಶ ಮಡಿವಾಳರ, ವಿನಯಕುಮಾರ ಪಾಟೀಲ ನಿರ್ವಹಿಸಿದರು.

ಸಭೆ ಚಿತ್ರೀಕರಣಕ್ಕೆ ಆಕ್ಷೇಪ, ಗೊಂದಲ: ಸಭೆ ಆರಂಭವಾಗುತ್ತಿದ್ದಂತೆ ಕೆಲ ಯುವಕರು ಕಾರ್ಯಕ್ರಮವನ್ನು ಮೊಬೈಲ್ ಮೂಲಕ ಚಿತ್ರೀಕರಿಸಲು ಮುಂದಾಗಿದ್ದನ್ನು ಗಮನಿಸಿದ ಮುಖಂಡರು ಅವರನ್ನು ಹೊರಗೆ ಕಳುಹಿಸಿದ್ದರು. ನಂತರ, ಮತ್ತೆ ಅದೇ ಯುವಕರು ವಿಡಿಯೋ ಚಿತ್ರೀಕರಿಸಲು ಮುಂದಾದರು. ಇದರಿಂದ ಸಿಟ್ಟಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಯುವಕರ ಮೊಬೈಲ್ ಕಿತ್ತುಕೊಳ್ಳಲು ಮುಂದಾದಾಗ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು. ನಂತರ ಚಿತ್ರೀಕರಿಸಿದ ವಿಡಿಯೋ ಅಳಿಸಿಹಾಕಿ ಮೊಬೈಲ್ ಹಿಂತರುಗಿಸಿ, ಪೊಲೀಸರ ಸಹಾಯದಿಂದ ಯುವಕರನ್ನು ಹೊರಗೆ ಕಳುಹಿಸಲಾಯಿತು. ನಂತರ ಸಭೆ ಸುಗುಮವಾಗಿ ನಡೆಯಿತು. ಈ ವಿಷಯದ ಕುರಿತು ಎದುರಾಳಿಗಳಿಗೆ ಮಾಜಿ ಸಚಿವ ಎಚ್.ಕೆ. ಪಾಟೀಲ ತರಾಟೆಗೆ ತಗೆದುಕೊಂಡರು. ‘ಇಲ್ಲಿ ನಡೆಸಲಾಗುತ್ತಿರುವ ಪ್ರತಿಯೊಂದು ಕಾಂಗ್ರೆಸ್ ಪಕ್ಷದ ಸಭೆಯ ವಿಡಿಯೋ ಚಿತ್ರೀಕರಿಸಿ, ಸಭೆಯಲ್ಲಿ ಭಾಗವಹಿಸುವ ಜನರನ್ನು ಹೆದರಿಸುವ ಪ್ರವೃತ್ತಿಯನ್ನು ಕೈಬಿಡಬೇಕು. ಇದ್ಯಾವುದಕ್ಕೂ ಇಲ್ಲಿನ ಮತದಾರರು ಜಗ್ಗುವುದಿಲ್ಲ, ಬಗ್ಗುವುದಿಲ್ಲ’ ಎಂದು ಹೇಳಿದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...