More

    ನಮ್ಮ ಸರ್ಕಾರ ಬೀಳೋದಿಲ್ಲ; ರಾಮಲಿಂಗಾ ರೆಡ್ಡಿ

    ಬೆಂಗಳೂರು: ಬಿಜೆಪಿಯವರಿಗೆ ಮಾಡಲು ಏನೂ ಕೆಲಸ ಇಲ್ಲ, ಮೊದಲೇ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದಾರೆ. ಈಗ ಲೋಕಸಭಾ ಚುನಾವಣೆಗೂ ರಾಜ್ಯದಲ್ಲಿ ಅವರಿಗೆ ಸಿಂಗಲ್ ಡಿಜಿಟ್ ಬರಲಿದೆ. ಕೇಂದ್ರದಲ್ಲಿ ಅವರಿಗೆ ಸರ್ಕಾರ ರಚಿಸುವ ವಿಶ್ವಾಸ ಇಲ್ಲ, ಹಗಲು ಕನಸು ಕಾಣುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಲೇವಡಿ ಮಾಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ಮೊದಲು ಪ್ರತಿಪಕ್ಷದಲ್ಲಿದ್ದು ಒಳ್ಳೆಯ ಕೆಲಸ ಮಾಡಲಿ. ಅವರ ಭ್ರಷ್ಟ ಆಡಳಿತವನ್ನು ಜನರು ನೋಡಿದ್ದಾರೆ. ಸರಿಯಾಗಿ ಆಡಳಿತ ನಡೆಸದಿರುವುದನ್ನು ಜನ ನೋಡಿದ್ದಾರೆ. ನಮಗೆ ಲೋಕಸಭಾ ಚುನಾವಣೆಗೆ ಪಕ್ಷಕ್ಕೆ ಹೆಚ್ಚು ಸ್ಥಾನ ಬರಲಿದೆ ಎಂದು ಹೇಳಿದರು.
    ಬಿಜೆಪಿ ಅಧಿಕಾರಕ್ಕೆ ಬಂದಾಗ ಕಿತ್ತಾಡಿಕೊಂಡು ಸರ್ಕಾರವನ್ನು ಕಳೆದುಕೊಳ್ಳುತ್ತಾರೆ. ರಾಜ್ಯದಲ್ಲಿ ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿರುತ್ತದೆ. ರಾಜ್ಯದಲ್ಲಿ ಈ ಅವಧಿಯಷ್ಟೇ ಅಲ್ಲ, ಮುಂದಿನ ಅವಧಿಯಲ್ಲೂ ನಮ್ಮದೇ ಸರ್ಕಾರ ಇರಲಿದೆ. ನಮ್ಮ ಸರ್ಕಾರ ಬೀಳೋದಿಲ್ಲ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts