More

    ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅಭಿಯಾನಕ್ಕೆ ಚಾಲನೆ

    ಬೆಂಗಳೂರು: ವಿಶ್ವ ದೃಷ್ಟಿ ದಿನದ ಅಂಗವಾಗಿ ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಚಾಲನೆ ನೀಡಿದರು.

    ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಡಾ.ರಾಜ್ ಕುಮಾರ್ ಟ್ರಸ್ಟ್ ಮತ್ತು ಒನ್ ಸೈಟ್ ಎಸ್ಸಿರ್ಲಾ ಲಕ್ಸೊಟ್ಟಿಕಾ ೌಂಡೇಷನ್ ಸಹಯೋಗದಲ್ಲಿ ‘ಕೆಲಸದ ಸ್ಥಳದಲ್ಲಿ ಕಣ್ಣಿನ ಆರೋಗ್ಯ’ ಶೀರ್ಷಿಕೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಕೆ.ಸಿ.ಜನರಲ್ ಆಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡವರಿಗೆ, ಕನ್ನಡಕದ ಅವಶ್ಯಕತೆ ಇದ್ದರೆ ಒನ್ ಸೈಟ್ ಎಸ್ಸಿರ್ಲಾ ಲಕ್ಸೊಟ್ಟಿಕಾ ೌಂಡೇಷನ್‌ವತಿಯಿಂದ ಉಚಿತ ಕನ್ನಡಕ ನೀಡಲಾಗುವುದು.

    ಈಗಿರುವ ತಂತ್ರಜ್ಞಾನದಿಂದ ಶೇ.80ರಷ್ಟು ದೃಷ್ಟಿ ದೋಷವನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಸಮೀಪ ದೃಷ್ಟಿಯ ತಡೆಯುವಲ್ಲಿ ಈ ಅಭಿಯಾನ ಪ್ರಮುಖ ಪಾತ್ರವಹಿಸುತ್ತದೆ. ಜನರ ಕಣ್ಣುಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಳ್ಳಲು ಕೆಸಿ ಜನರಲ್ ಆಸ್ಪತ್ರೆಯ ದೃಷ್ಟಿ ಕೇಂದ್ರದಲ್ಲಿ ಕಣ್ಣಿನ ಬಗ್ಗೆ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಪ್ರದರ್ಶಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ತಿಂಗಳಿಗೆ 2000 ಕ್ಕೂ ಹೆಚ್ಚು ಜನರಿಗೆ ಉಚಿತ ಕಣ್ಣಿನ ಪರೀಕ್ಷೆ ನಡೆಸುವ ಗುರಿಯನ್ನು ಹೊಂದಲಾಗಿದೆ.

    ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್, ಕೆ.ಜಿ.ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಇಂದಿರಾ ಕಬಾಡೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts