More

    ನಮ್ಮ ಹೋರಾಟ ಮೀಸಲಾತಿಗಾಗಿ: ಜಯಮೃತ್ಯುಂಜಯ ಶ್ರೀ ಹೇಳಿಕೆ

    ರಿಪ್ಪನ್‌ಪೇಟೆ: ರಾಜ್ಯದಲ್ಲಿ ಯಾವುದೇ ಪಕ್ಷ ಅಽಕಾರದಲ್ಲಿರಲಿ, ಮೀಸಲಾತಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಈ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು ಎಂದು ಪಂಚಮಸಾಲಿ ಮಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
    ಕೋಡೂರು ಚಂದ್ರಮೌಳಿ ಮನೆಯಲ್ಲಿ ಭಾನುವಾರ ಆಯೋಜಿಸಿದ್ದ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿ, ಪಂಚಮಸಾಲಿ ವೀರಶೈವ ಲಿಂಗಾಯತ ಸಮಾಜ ಸ್ವಾಭಿಮಾನಿಯಾಗಿದ್ದು ಶಾಲೆ, ಆಸ್ಪತ್ರೆ, ಮಠಮಾನ್ಯಗಳಿಗೆ ಭೂಮಿ ದಾನ ಮಾಡಿದೆ. ಜತೆಗೆ ದಾಸೋಹ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂದರು.
    ಸಮಾಜ ಸಂಘಟನೆಯಲ್ಲಿ ಹಿಂದುಳಿಯದೆ ಸದಾ ಚಟುವಟಿಕೆಯಲ್ಲಿರುವ ಸಮಾಜ ನಮ್ಮದು. ಪಂಚಮಸಾಲಿ ಲಿಂಗಾಯತರಲ್ಲಿ ಸಾಕಷ್ಟು ಉಪಪಂಗಡಗಳಿದ್ದು ಅವುಗಳನ್ನು ಹೋರಾಟದಲ್ಲಿ ತೊಡಗಿಸಿಕೊಂಡು ಜಾಗೃತಗೊಳಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯ ರೂಪುರೇಷೆ ಸಿದ್ಧಪಡಿಸಿ ಜಿಲ್ಲಾದ್ಯಂತ ತಿಳಿಸಿ ಹೇಳಲಾಗುವುದು. ಮೀಸಲಾತಿ ಸಮರ್ಪಕವಾಗಿ ಅನುಷ್ಠಾನಗೊಳ್ಳುವವರೆಗೂ ನಾನು ಸುಮ್ಮನೆ ಕೂರುವುದಿಲ್ಲ. ೧೨ನೇ ಶತಮಾನದಲ್ಲಿನ ಕಲ್ಯಾಣ ಕ್ರಾಂತಿ ಮಾಡಿದ ಬಸವಣ್ಣನಂತೆ ಕರ್ನಾಟಕ ಕ್ರಾಂತಿ ಮಾಡುವುದಾಗಿ ಸರ್ಕಾರಕ್ಕೆ ಮತ್ತು ಜನಪ್ರತಿನಿಽಗಳಿಗೆ ಎಚ್ಚರಿಕೆ ನೀಡಿದರು.
    ಶಿಕ್ಷಣ ಮತ್ತು ಉದ್ಯೋಗದಲ್ಲಿ ಪಂಚಮಸಾಲಿ ವೀರಶೈವ ಲಿಂಗಾಯತರನ್ನು ೨ ಎ ಮೀಸಲಾತಿ ಪಟ್ಟಿಗೆ ಸೇರಿಸಿ. ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಸರ್ಕಾರ ಶೀಘ್ರ ಶಿ-Áರಸು ಮಾಡಬೇಕೆಂದು ಒತ್ತಾಯಿಸಿ ಮುಂದಿನ ದಿನಗಳಲ್ಲಿ ವಿನೂತನ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಹಕ್ರೆ ಮಲ್ಲಿಕಾರ್ಜುನ, ಚನ್ನಬಸಪ್ಪ, ರುದ್ರೇಶ್, ವಿನಯ, ಜಿ.ಟಿ.ಈಶ್ವರ್, ಹಾಲಪ್ಪ, ಜೆ.ಎಸ್.ಚಂದ್ರಣ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts